ಬುಧವಾರದಂದು ಆರೋಗ್ಯ ಇಲಾಖೆ ರಾಜ್ಯದಾದ್ಯಂತ ವಿಶ್ವ ತಂಬಾಕು ರಹಿತ ದಿನವನ್ನು ಆಯೋಜಿಸಿದ್ದು, ಇದೇ ಸಂದರ್ಭದಲ್ಲಿ ತಂಬಾಕು ಸೇವನೆ ಕುರಿತಂತೆ ಶಾಕಿಂಗ್ ಮಾಹಿತಿ ಬಹಿರಂಗವಾಗಿದೆ.
ವಿಶ್ವ ಆರೋಗ್ಯ ಸಂಸ್ಥೆಯ ‘ಗ್ಲೋಬಲ್ ಅಡಾಲ್ಟ್ ಟೊಬ್ಯಾಕೋ’ ಸಮೀಕ್ಷೆ 2016-17 ರ ಪ್ರಕಾರ ರಾಜ್ಯದಲ್ಲಿ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ತಂಬಾಕು ಉತ್ಪನ್ನ ಬಳಸುತ್ತಿರುವುದು ಕಂಡುಬಂದಿದ್ದು, ಅಂದಾಜು 3 ಕೋಟಿ ಮಂದಿ ಒಂದಲ್ಲ ಒಂದು ರೀತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಬಳಸುತ್ತಿದ್ದಾರೆ ಎನ್ನಲಾಗಿದೆ.
ಈ ಪೈಕಿ ಶೇಕಡ 22.8ರಷ್ಟು ವಯಸ್ಕರಲ್ಲಿ ಶೇಕಡ 8.8ರಷ್ಟು ಮಂದಿ ಧೂಮಪಾನಿಗಳಾಗಿದ್ದು, ಇನ್ನು ಶೇಕಡಾ 16.3ರಷ್ಟು ಮಂದಿ ಧೂಮರಹಿತ ತಂಬಾಕು ಉತ್ಪನ್ನಗಳನ್ನು ಬಳಸುತ್ತಿದ್ದಾರೆ ಎನ್ನಲಾಗಿದೆ. ಆತಂಕಕಾರಿ ಸಂಗತಿ ಎಂದರೆ ಅಪ್ರಾಪ್ತ ವಯಸ್ಕರು ಸಹ ತಂಬಾಕು ಬಳಕೆ ಮಾಡುತ್ತಿರುವುದು ಕಂಡುಬಂದಿದೆ.