alex Certify BIG NEWS: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ; ಪುಂಡರನ್ನು ಸದೆಬಡಿಯಲಾಗುವುದು; ಸಿಎಂ ಬೊಮ್ಮಾಯಿ ಖಡಕ್ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ; ಪುಂಡರನ್ನು ಸದೆಬಡಿಯಲಾಗುವುದು; ಸಿಎಂ ಬೊಮ್ಮಾಯಿ ಖಡಕ್ ಎಚ್ಚರಿಕೆ

ಹುಬ್ಬಳ್ಳಿ: ಬೆಳಗಾವಿಯಲ್ಲಿ ಕಾನೂನು ಸುವ್ಯವಸ್ಥೆ ಕದಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಸೂಚಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಷ್ಟ್ರಭಕ್ತರ ಪ್ರತಿಮೆಗಳನ್ನು ಧ್ವಂಸಗೊಳಿಸುವುದು ಸರಿಯಲ್ಲ. ಕೆಲ ಪುಂಡರು ಇಂತ ದುಷ್ಕೃತ್ಯಗಳಲ್ಲಿ ತೊಡಗಿದ್ದಾರೆ. ಅಂತವರನ್ನು ಸದೆಬಡಿಯಲಾಗುವುದು ಎಂದರು.

ಬೆಳಗಾವಿ ಹಿಂಸಾಚಾರ ಪ್ರಕರಣ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ಎಂಇಎಸ್ ಪುಂಡರ ವಿರುದ್ಧವೂ ಕಠಿಣ ಕ್ರಮಕ್ಕೆ ಸೂಚಿಸಲಾಗಿದೆ. ಮತ್ತೆ ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...