ಚೆನ್ನೈ: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಆರ್ಮುಗಸ್ವಾಮಿ ಆಯೋಗ ತನಿಖೆಗೆ ಆದೇಶ ನೀಡಿದೆ.
ತಮಿಳುನಾಡು ವಿಧಾನಸಭೆಯಲ್ಲಿ ನ್ಯಾ.ಆರ್ಮುಗಸ್ವಾಮಿ ಆಯೋಗದ ತನಿಖಾ ವರದಿ ಮಂಡನೆಯಾಗಿದ್ದು, ಜಯಲಲಿತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿಕಲಾ ನಟರಾಜನ್, ಮಾಜಿ ಆರೋಗ್ಯ ಸಚಿವ ವಿಜಯಭಾಸ್ಕರ್, ಮಾಜಿ ಆರೋಗ್ಯ ಕಾರ್ಯದರ್ಶಿ ರಾಧಾಕೃಷ್ಣನ್ ಹಾಗೂ ವೈದ್ಯ ಶಿವಕುಮಾರ್ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ.
ತಮಿಳುನಾಡು ಮಾಜಿ ಸಿಎಂ ಎಐಎಡಿಎಂಕೆ ನಾಯಕಿ ಜಯಲಲಿತಾ ಸಾವಿನ ಪ್ರಕರಣದ ವಿಚಾರಣೆಗಾಗಿ ನ್ಯಾ.ಆರ್ಮುಗಸ್ವಾಮಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಇದೀಗ ಸಮಿತಿಯು ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಸೇರಿದಂತೆ ಮೂವರ ವಿರುದ್ಧ ತನಿಖೆಗೆ ಆದೇಶಿಸಿ ವರದಿ ಮಂಡನೆ ಮಾಡಿದೆ.