ಹಾಸನ: ಹಾಸನ ಮೆಡಿಕಲ್ ಕಾಲೇಜು ಪ್ರೊಫೆಸರ್ ಓರ್ವರ ಕರ್ಮಕಾಂಡ ಬಯಲಾಗಿದೆ. ತರಬೇತಿ ವೈದ್ಯೆ ಮೇಲೆಯೇ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಪ್ರೊಫೆಸರ್ ವಿರುದ್ಧ ಕೇಳಿಬಂದಿದೆ.
ಡ್ಯೂಟಿ ಡಾಕ್ಟರ್ ಮೇಲೆಯೇ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಹಿನ್ನೆಲೆಯಲ್ಲಿ ಹಾಸನ ಮೆಡಿಕಲ್ ಕಾಲೇಜು ಪ್ರೊ.ಡಾ.ಲೋಕೇಶ್ ರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಮೆಡಿಕಲ್ ಕಾಲೇಜಿನಲ್ಲಿ ತರಬೇತಿ ವೈದ್ಯೆಯಾಗಿ ನೇಮಕಗೊಂಡಿದ್ದ ಯುವತಿ ಮೇಲೆ ಡಾ.ಲೋಕೇಶ್ ಲೈಂಗಿಕ ದೌರ್ಜನ್ಯವೆಸಗಿದ್ದು, ರೋಗಿಗೆ ಚಿಕಿತ್ಸೆ ನೀಡುವ ವೇಳೆ ವಿದ್ಯಾರ್ಥಿಗಳ ಎದುರಲ್ಲಿ ವೈದ್ಯೆ ಜತೆ ಅನುಚಿತವಾಗಿ ವರ್ತಿಸಿದ್ದಾರೆ. ಅಲ್ಲದೇ ಲಿಫ್ಟ್ ನಲ್ಲಿ ಬಲವಂತವಾಗಿ ಕಿಸ್ ಮಾಡಿ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಮೇಲ್ನೋಟಕ್ಕೆ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಪ್ರೊ.ಡಾ.ಲೋಕೇಶ್ ನನ್ನು ಸಸ್ಪೆಂಡ್ ಮಾಡಲಾಗಿದ್ದು, ತನಿಖೆಗೆ ಆದೇಶ ನೀಡಲಾಗಿದೆ ಎಂದು ತಿಳಿದುಬಂದಿದೆ.