alex Certify BIG NEWS: ತಾರಕಕ್ಕೇರಿದ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ; ರಾಜ್ಯದ ಬಸ್ ಗಳ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಾರಕಕ್ಕೇರಿದ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ; ರಾಜ್ಯದ ಬಸ್ ಗಳ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿದ್ದು, ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿ ಕಿಡಿಗೇಡಿಗಳು ಪುಂಡಾಟ ಮೆರೆದಿದ್ದಾರೆ.

ಪುಣೆಯಿಂದ ಅಥಣಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ‌ ಸಿ ಬಸ್ ಮೇಲೆ ಮೀರಜ್-ಕಾಗವಾಡ ಮಾರ್ಗದಲ್ಲಿ ಕಲ್ಲುತೂರಾಟ ನಡೆಸಲಾಗಿದೆ. ಬಸ್ ನ ಮುಂಭಾಗದ ಗಾಜು ಸಂಪೂರ್ಣವಾಗಿ ಪುಡಿ ಪುಡಿಯಾಗಿದ್ದು, ಬಸ್ ಜಖಂಗೊಂಡಿದೆ.

ಬೆಳಗಾವಿಯ ಅಥಣಿ ಡಿಪೋಗೆ ಸೇರಿದ ಬಸ್ ಇದಾಗಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಕಲ್ಲು ತೂರಾಟ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು ವಾಹನ ಸಂಚಾರ ಸ್ಥಗಿತಗೊಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...