ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿರುವ ವಿಪಕ್ಷ ಕಾಂಗ್ರೆಸ್ ಪೇಸಿಎಂ ಪೋಸ್ಟರ್ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದೆ. ರಾಜಧಾನಿ ಬೆಂಗಳೂರಿನ ಪ್ರಮುಖ ರಸ್ತೆಗಳ ಗೋಡೆಗಳ ಮೇಲೆ ಸ್ವತಃ ಕಾಂಗ್ರೆಸ್ ನಾಯಕರೇ ಪೋಸ್ಟರ್ ಅಂಟಿಸಿದ್ದಾರೆ.
ಕೆಪಿಸಿಸಿ ಕಚೇರಿಯಿಂದ ರೇಸ್ ಕೋರ್ಸ್ ರಸ್ತೆಗೆ ಆಗಮಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ಎಂ.ಬಿ.ಪಾಟೀಲ್, ರಿಜ್ವಾನ್ ಅರ್ಷದ್ ಸೇರಿದಂತೆ ಪ್ರಮುಖ ನಾಯಕರು ವೋಲ್ವೋ ಬಿಲ್ಡಿಂಗ್ ಗೋಡೆ, ಬಿಎಂಟಿಸಿ ಬಸ್, ಆಟೋಗಳ ಮೇ ಪೇಸಿಎಂ ಪೋಸ್ಟರ್ ಅಂಟಿಸಿ ಭ್ರಷ್ಟ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಕೆಲವೆಡೆ ಬ್ಯಾರಿಕೇಡ್ ಗಳನ್ನು ಹಾಕಿ ಕಾಂಗ್ರೆಸ್ ನಾಯಕರನ್ನು ಪೊಲೀಸರು ತಡೆಯಲು ಯತ್ನಿಸಿದ್ದಾರೆ. ಕಾಂಗ್ರೆಸ್ ನಾಯಕರನ್ನು ನಿಯಂತ್ರಿಸಲು ಪೊಲೀಸರು ಮುಂದಾದರೂ ಬಗ್ಗದ ನಾಯಕರು ಇನ್ನೊಂದು ದಿಕ್ಕಿನಲ್ಲಿ ಸಾಗಿ ಗಲ್ಲಿ ಗಲ್ಲಿಗಳ ಗೋಡೆಗಳ ಮೇಲೆ ಪೇಸಿಎಂ ಪೋಸ್ಟರ್ ಅಂಟಿಸಿದ್ದಾರೆ. 40% ಕಮಿಷನ್ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಮತ್ತೊಂದೆಡೆ ಪೋಸ್ಟರ್ ಅಂಟಿಸಿದ ಕಾಂಗ್ರೆಸ್ ನ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.