ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಏನೇ ತಿಪ್ಪರಲಾಗ ಹಾಕಿದರೂ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಕಾಂಗ್ರೆಸ್ ನ ಭಾರತ್ ಜೋಡೋ ಅಲ್ಲ ಏನೇ ತಿಪ್ಪರಲಾಗಾ ಹಾಕಿದರೂ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲ್ಲ ಎಂದು ತಿಳಿಸಿದರು.
ನಾನು ಸೆಪ್ಟೆಂಬರ್ 22ರಿಂದ ರಾಜ್ಯಾದ್ಯಂತ ಪ್ರವಾಸ ಆರಂಭಿಸುತ್ತೇನೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.