alex Certify BIG NEWS: ತೀರ್ಥಹಳ್ಳಿಯಲ್ಲಿ NIA ದಿಢೀರ್ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತೀರ್ಥಹಳ್ಳಿಯಲ್ಲಿ NIA ದಿಢೀರ್ ದಾಳಿ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತೀರ್ಥಹಳ್ಳಿಯಲ್ಲಿ ಎನ್ ಐ ಎ(ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ತೀರ್ಥಹಳ್ಳಿಯ ಸೊಪ್ಪುಗುಡ್ಡೆಯಲ್ಲಿರುವ ಶಂಕಿತ ಉಗ್ರ ಶಾರಿಕ್ ಹಾಗೂ ಮಾಜ್ ಮುನೀರ್ ನಿವಾಸಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. 5 ಕಾರುಗಳಲ್ಲಿ ಆಗಮಿಸಿರುವ 15ಕ್ಕೂ ಹೆಚ್ಚು ಅಧಿಕಾರಿಗಳು ಮನೆಗಳಲ್ಲಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ, ತುಂಗಾ ದಡದಲ್ಲಿ ಟ್ರಯಲ್ ಬ್ಲಾಸ್ಟ್ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಎನ್ ಐ ಎ, ಇದೇ ಪ್ರಕರಣ ಸಂಬಂಧ ತೀರ್ಥಹಳ್ಳಿಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...