alex Certify BIG NEWS: ತೀವ್ರ ಕುತೂಹಲಕ್ಕೆ ಕಾರಣವಾಯ್ತು ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಜೊತೆಗಿನ ಕಿಚ್ಚ ಸುದೀಪ್ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತೀವ್ರ ಕುತೂಹಲಕ್ಕೆ ಕಾರಣವಾಯ್ತು ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಜೊತೆಗಿನ ಕಿಚ್ಚ ಸುದೀಪ್ ಭೇಟಿ

ಖ್ಯಾತ ನಟ ಕಿಚ್ಚ ಸುದೀಪ್‌ ತಮ್ಮ ಮುಂಬರುವ ʼವಿಕ್ರಾಂತ್‌ ರೋಣʼ ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇದರ ಮಧ್ಯೆ ಚಿತ್ರದ ಪ್ರಚಾರಕ್ಕಾಗಿ ನವದೆಹಲಿಗೆ ತೆರಳಿದ್ದ ಅವರು ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಅವರನ್ನು ಭೇಟಿಯಾಗಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಪ್ರಹ್ಲಾದ್‌ ಜೋಷಿಯವರ ನಿವಾಸಕ್ಕೆ ಭೇಟಿ ನೀಡಿದ ಕಿಚ್ಚ ಸುದೀಪ್‌ ಅವರೊಂದಿಗೆ ಉಪಹಾರ ಸೇವಿಸಿ ಮಾತುಕತೆ ನಡೆಸಿದ್ದಾರೆ.

ಕಿಚ್ಚ ಸುದೀಪ್‌ ರಾಜಕೀಯ ಪ್ರವೇಶ ಮಾಡಲಿದ್ದಾರೆಂಬ ಗುಸುಗುಸು ಆಗಾಗ್ಗೆ ಕೇಳಿ ಬರುತ್ತಿದ್ದು, ಇದರ ಮಧ್ಯೆ ಪ್ರಹ್ಲಾದ್‌ ಜೋಷಿಯವರ ಜೊತೆಗಿನ ಅವರ ಭೇಟಿ ಇನ್ನಷ್ಟು ಕುತೂಹಲ ಮೂಡಿಸಿದೆ.

ಸಚಿವ ಪ್ರಹ್ಲಾದ್‌ ಜೋಷಿ ಸಾಮಾಜಿಕ ಜಾಲತಾಣ ಟ್ವಿಟ್ಟರ್‌ ನಲ್ಲಿ ಕಿಚ್ಚ ಸುದೀಪ್‌ ಅವರ ಭೇಟಿ ವಿಚಾರವನ್ನು ಹಂಚಿಕೊಂಡಿದ್ದು, 13 ವರ್ಷಗಳ ನಂತರ ದೆಹಲಿಗೆ ಭೇಟಿ ನೀಡುತ್ತಿರುವ ಸುದೀಪ್ ಅವರು, ಕಲೆ ಸಂಸ್ಕೃತಿ ಮತ್ತು ಸಾಮಾಜಿಕ‌ ಚಟುವಟಿಕೆಗಳ ಬಗ್ಗೆ ಚರ್ಚಿಸಿದರು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...