ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ತಾರಕಕ್ಕೇರಿರುವ ನಡುವೆಯೇ ದೆಹಲಿಗೆ ದೌಡಾಯಿಸಿರುವ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರ ಶಾಸಕ ಅರವಿಂದ ಬೆಲ್ಲದ್, ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ದೆಹಲಿಯಲ್ಲಿ ಸಂತೋಷ್ ನಿವಾಸದಲ್ಲಿ ಭೇಟಿಯಾದ ಅರವಿಂದ್ ಬೆಲ್ಲದ್ ಎರಡು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ರಾಜ್ಯ ರಾಜಕೀಯ ಬೆಳವಣಿಗೆ, ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಜೂನ್ 18 ರಂದು ದೇಶಾದ್ಯಂತ ವೈದ್ಯರ ಪ್ರತಿಭಟನೆ
ಬಿ.ಎಲ್. ಸಂತೋಷ್ ಭೇಟಿ ಬಳಿಕ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ ಮಾಡಲು ನಡೆಸಿದ ಯತ್ನ ಸಫಲವಾಗಿಲ್ಲ ಎನ್ನಲಾಗಿದೆ. ಒಟ್ಟಾರೆ ಜೂನ್ 16ಕ್ಕೆ ಅರುಣ್ ಸಿಂಗ್ ರಾಜ್ಯ ಭೇಟಿಗೂ ಮೊದಲೇ ಬೆಲ್ಲದ್ ಅವರು ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.