ವಿಜಯನಗರ: ತುಂಗಭದ್ರಾ ಜಲಾಶಯದಿಂದ 1ಲಕ್ಷದ 10 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗಿದ್ದು, ಹಂಪಿಯಲ್ಲಿ ಪ್ರವಾಹ ಪರಿಸ್ಥಿತಿಯುಂಟಾಗಿದೆ. ಐತಿಹಾಸಿಕ ಸ್ಮಾರಕಗಳು ಸಂಪೂರ್ಣ ಜಲಾವೃತಗೊಂಡಿದೆ.
ಜಲಾಶಯದಲ್ಲಿ ಒಳಹರಿವು ಹೆಚ್ಚಾದ ಕಾರಣ 20 ಗೇಟ್ ಗಳನ್ನು 2.50 ಅಡಿ ಎತ್ತರಿಸಿ, 10 ಗೇಟ್ ಗಳನ್ನು 1.50 ಅಡಿ ಎತ್ತರಿಸಿ ನದಿಗೆ ನೀರು ಬಿಡಲಾಗಿದೆ. ಪರಿಣಾಮ ಹಂಪಿಯ ಪುರಂದರ ಮಂಟಪ, ಸಾಲು ಮಂಟಪ, ಧಾರ್ಮಿಕ ವಿಧಿವಿಧಾನಗಳ ಮಂಟಪ ಸೇರಿದಂತೆ ಹಲವು ಸ್ಮಾರಕಗಳು ಮುಳುಗಡೆಯಾಗಿವೆ.
ಕಂಪ್ಲಿ ಹಾಗೂ ಗಂಗಾವತಿ ನಡುವಿನ ಸೇತುವೆ ಜಲಾವೃತಗೊಂಡಿದ್ದು, ಎರಡು ಊರುಗಳ ನಡುವಿನ ಸಂಪರ್ಕ ಬಹುತೇಕ ಕಡಿತಗೊಂಡಿದೆ.