ತುಮಕೂರು: ತುಂಬಾಡಿ ಕೆರೆಯಲ್ಲಿ ದುರಂತವೊಂದು ಸಂಭವಿಸಿದ್ದು, ಬಾಲಕ ಸೇರಿದಂತೆ ಇಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದ ಕೆರೆಯಲ್ಲಿ ಈ ಘಟನೆ ನಡೆದಿದೆ. 45 ವರ್ಷದ ಕೃಷ್ಣಪ್ಪ ಹಾಗೂ 11 ವರ್ಷದ ಬಾಲಕ ನಿತಿನ್ ಮೃತ ದುರ್ದೈವಿಗಳು.
ಘಟನಾ ಸ್ಥಳಕ್ಕೆ ಕೊರಟಗೆರೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.