ಬೆಂಗಳೂರು: ತುಮಕೂರಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಲಾಗಿದೆ.
ಈ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದು, ತುಮಕೂರು ಬಳಿ ಅಪಘಾತದಲ್ಲಿ 9 ಜನರು ಮೃತಪಟ್ಟಿದ್ದಾರೆ. ಅಪಘಾತ ದಿಗ್ಭ್ರಮಯನ್ನುಂಟುಮಾಡಿದೆ. ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ.
ಮೃತರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳ ಚಿಕಿತ್ಸೆಗೆ 50 ಸಾವಿರ ರೂಪಾಯಿ ಘೋಷಿಸಿದ್ದಾರೆ. ಪ್ರಧಾನಿ ಮೋದಿಯವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.