ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನವದೆಹಲಿಯಲ್ಲಿ ತುರ್ತು ಸಭೆ ಕರೆದಿದ್ದಾರೆ.
ಸಂಜೆ 5:30ಕ್ಕೆ ಎಐಸಿಸಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಪಿಸಿಸಿ ಅಧ್ಯಕ್ಷರು, ಸಿ ಎಲ್ ಪಿ ನಾಯಕರು ಭಾಗಿಯಾಗಲಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಹೋರಾಟದ ರೂಪುರೇಷೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಲೋಕಸಭಾ ಸ್ಥಾನದಿಂದ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿರುವುದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರವಾಗಿ ಖಂಡಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.