alex Certify BIG NEWS: ತೆಲಂಗಾಣದಲ್ಲಿ ಶಾಲಾ-ಕಾಲೇಜುಗಳು ಬಂದ್; ಕೇರಳದಲ್ಲೂ ರಜೆ ಘೋಷಣೆ; ಕರ್ನಾಟಕದಲ್ಲೂ ಮತ್ತೆ ಕ್ಲೋಸ್ ಆಗುತ್ತಾ ಶಾಲೆಗಳು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತೆಲಂಗಾಣದಲ್ಲಿ ಶಾಲಾ-ಕಾಲೇಜುಗಳು ಬಂದ್; ಕೇರಳದಲ್ಲೂ ರಜೆ ಘೋಷಣೆ; ಕರ್ನಾಟಕದಲ್ಲೂ ಮತ್ತೆ ಕ್ಲೋಸ್ ಆಗುತ್ತಾ ಶಾಲೆಗಳು…?

ಬೆಂಗಳೂರು: ದೇಶಾದ್ಯಂತ ಕೊರೊನಾ ಸೋಂಕು ಸ್ಫೋಟಗೊಂಡಿದ್ದು, ಪ್ರತಿ ದಿನ 2.71 ಲಕ್ಷಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿವೆ. ವಿವಿಧ ರಾಜ್ಯಗಳಲ್ಲಿ ಶಾಲಾ-ಕಾಲೇಜುಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಹಲವು ರಾಜ್ಯಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಿವೆ.

ಶಾಲಾ – ಕಾಲೇಜುಗಳು ಕೊರೊನಾ ಹಾಟ್ ಸ್ಫಾಟ್ ಆಗುತ್ತಿದ್ದು, ವಿದ್ಯಾರ್ಥಿಗಳು, ಶಿಕ್ಷಕರನ್ನು ಬೆಂಬಿಡದೇ ಕಾಡುತ್ತಿದೆ. ದಿನದಿಂದ ದಿನಕ್ಕೆ ಮಕ್ಕಳು ಸೋಂಕಿಗೆ ಒಳಗಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳ, ಪಶ್ಚಿಮ ಬಂಗಾಳಗಳಲ್ಲಿ ಶಾಲೆಗೆ ರಜೆ ನೀಡಿರುವ ಬೆನ್ನಲ್ಲೇ ಇದೀಗ ತೆಲಂಗಾಣ ಸರ್ಕಾರ ಕೂಡ ತಿಂಗಳಾಂತ್ಯದವರೆಗೆ ರಜೆ ಘೋಷಣೆ ಮಾಡಿದೆ.

ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜನವರಿ 31ವರೆಗೆ ತೆಲಂಗಾಣ ಸರ್ಕಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.

ಕೇರಳದಲ್ಲಿ ಕೋವಿಡ್ ಹಾಗೂ ಒಮಿಕ್ರಾನ್ ಅಟ್ಟಹಾಸ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 2 ವಾರಗಳ ಕಾಲ ಕೇರಳದಾದ್ಯಂತ 1-9ನೇ ತರಗತಿಗಳನ್ನು ಬಂದ್ ಮಾಡಲಾಗಿದ್ದು, ಆನ್ ಲೈನ್ ತರಗತಿಗಳು ಮಾತ್ರ ನಡೆಯಲಿವೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.

ರಾಜ್ಯದಲ್ಲಿಯೂ ವಿವಿಧ ಜಿಲ್ಲೆಗಳ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಸ್ಫೋಟಗೊಳ್ಳುತ್ತಿದ್ದು, ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಜಿಲ್ಲಾಡಳಿತ ಶಾಲೆಗಳಿಗೆ ರಜೆ ಘೋಷಣೆ ಮಾಡುತ್ತಿದೆ. ಆದಾಗ್ಯೂ ಮಕ್ಕಳಲ್ಲಿ ಸೋಂಕು ವ್ಯಾಪಕವಾಗಿ ಹರಡಿತ್ತಿರುವುದರಿಂದ ರಾಜ್ಯಾದ್ಯಂತ ಮತ್ತೆ ಶಾಲೆ-ಕಾಲೇಜುಗಳನ್ನು ಬಂದ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆಯೇ ಕಾದುನೋಡಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...