alex Certify BIG NEWS: ತೆಲಂಗಾಣ ಸಿಎಂ ಕೆ. ಚಂದ್ರಶೇಖರ ರಾವ್ ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತೆಲಂಗಾಣ ಸಿಎಂ ಕೆ. ಚಂದ್ರಶೇಖರ ರಾವ್ ಆಸ್ಪತ್ರೆಗೆ ದಾಖಲು

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೈದರಾಬಾದ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಿಎಂ ಕೆಸಿಆರ್ ಅವರಿಗೆ ಇಂದು ಬೆಳಿಗ್ಗೆ ಎದೆಯ ಭಾಗದಲ್ಲಿ ತೀವ್ರ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಕೆ. ಚಂದ್ರಶೇಖರ್ ರಾವ್ ಅವರಿಗೆ ಆಂಜಿಯೋಗ್ರಾಂ ಟೆಸ್ಟ್ ಮಾಡಲಾಗಿದ್ದು, 20 ವೈದ್ಯರ ತಂಡ ಅವರ ಆರೋಗ್ಯದ ಬಗ್ಗೆ ನಿಗಾ ವಹಿಸಿದೆ. ಪ್ರಸ್ತುತ ಅವರ ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ, ಆತಂಕ ಪಡುವ ಅಗತ್ಯವಿಲ್ಲ ಎಂದು ಸಿಎಂ ಆಪ್ತ ವಲಯಗಳು ತಿಳಿಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...