alex Certify BIG NEWS: ದತ್ತಪೀಠದಲ್ಲಿ ಮಾಂಸಾಹಾರ ಸೇವನೆ; ಇದೊಂದು ಅಕ್ಷಮ್ಯ ಅಪರಾಧ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿ.ಟಿ.ರವಿ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದತ್ತಪೀಠದಲ್ಲಿ ಮಾಂಸಾಹಾರ ಸೇವನೆ; ಇದೊಂದು ಅಕ್ಷಮ್ಯ ಅಪರಾಧ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿ.ಟಿ.ರವಿ ಆಗ್ರಹ

ಕಲಬುರ್ಗಿ: ದತ್ತಪೀಠದಲ್ಲಿ ಹೋಮ-ಹವನ ಮಾಡುವ ಸ್ಥಳದಲ್ಲಿ ಮಾಂಸಾಹಾರ ತಯಾರಿಸಿ ಸೇವನೆ ಮಾಡಿರುವುದು ಅಕ್ಷಮ್ಯ ಅಪರಾಧ. ನಿನ್ನೆ ರಾತ್ರಿಯೇ ನನ್ನ ಗಮನಕ್ಕೆ ಬಂದಿದ್ದು, ಈ ಬಗ್ಗೆ ಜಿಲ್ಲಾಡಳಿತವನ್ನು ಪ್ರಶ್ನೆ ಮಾಡಿದ್ದೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಿಡಿಕಾರಿದ್ದಾರೆ.

ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸಿ.ಟಿ.ರವಿ, ಯಾರ ಕುಮ್ಮಕ್ಕು ಇದ್ದರು ಕೂಡ ಇಂತಹ ಘಟನೆ ನಡೆಯದಂತೆ ನೋಡಿಕೊಳ್ಳುವುದು ಜಿಲ್ಲಾಡಳಿತದ ಜವಾಬ್ದಾರಿಯಾಗಿತ್ತು. ಕೋರ್ಟ್ ಆದೇಶವನ್ನು ಉಲ್ಲಂಘಿಸಿ ವಿವಾದಿತ ಸ್ಥಳದಲ್ಲಿ ಮಾಂಸಾಹಾರ ತಯಾರಿಸಿರುವುದು ತಪ್ಪು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕಣ್ಣಿನ ಆರೋಗ್ಯಕ್ಕೆ ಈ ಯೋಗ ಬೆಸ್ಟ್

ದತ್ತಪೀಠದ 300 ಮೀಟರ್ ವ್ಯಾಪ್ತಿಯಲ್ಲಿ ಮಾಂಸಾಹಾರ, ಪ್ರಾಣಿಬಲಿ ನಿಷೇಧಿಸಲಾಗಿದೆ. ಅದರೂ ಕೂಡ ಪ್ರಾಣಿಬಲಿ ನಡೆದಿದೆ. ಅಲ್ಲಿ ಹೇಗೆ ಮಾಂಸಾಹಾರ ಸೇವನೆಗೆ ಅವಕಾಶ ಸಿಕ್ಕಿತು? ನಿಯಮ ಉಲ್ಲಂಘನೆಯಾಗಿರುವುದು ಸ್ಪಷ್ಟವಾಗಿ ಕಂಡುಬರುತ್ತಿದೆ. ಅಲ್ಲಿ ಹೇಗೆ ಮಾಂಸಾಹಾರ ಸೇವನೆ ಮಾಡಿದರು? ಈ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. ಕೋರ್ಟ್ ಆದೇಶ ಉಲ್ಲಂಘನೆಯಾಗದಂತೆ ಯಾರಿಗೆ ಜವಾಬ್ದಾರಿ ವಹಿಸಲಾಗಿತ್ತು ಅವರು ಈ ಬಗ್ಗೆ ಉತ್ತರಿಸಬೇಕು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...