ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರೇ ನೀವು ಪರೋಕ್ಷವಾಗಿ ಏನನ್ನು ಸ್ಥಾಪಿಸಲು ಹೊರಟಿದ್ದೀರಿ ಎಂಬುದನ್ನು ಸ್ಪಷ್ಟಪಡಿಸಿ ಎಂದು ರಾಜ್ಯ ಬಿಜೆಪಿ ಆಗ್ರಹಿಸಿದೆ.
ದಲಿತ ಸಿಎಂ ಆದರೆ ಖುಷಿ, ನಾನೂ ದಲಿತನೇ ಎಂದು ಹೇಳುವ ಮೂಲಕ ಮತ್ತೊಮ್ಮೆ ನಾನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಪ್ರತಿಪಾದಿಸದಂತಾಯ್ತು. ನಿಮ್ಮ ಈ ಸ್ವಾರ್ಥ ಜನರಿಗೆ ಅರ್ಥವಾಗುವುದಿಲ್ಲ ಎಂದು ಭಾವಿಸಿದ್ದೀರಾ? ಎಂದು ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿಕಾರಿದೆ.
ಸಿದ್ದರಾಮಯ್ಯನವರಿಗೆ ದಲಿತರ ಬಗ್ಗೆ ಕಾಳಜಿ ಇದ್ದರೆ ದಲಿತರೇ ಸಿಎಂ ಎಂದು ಘೋಷಿಸಲಿ ಎಂದು ನಾವು ಆಗ್ರಹಿಸಿದ್ದೆವು. ಆದರೆ ಸಿದ್ದರಾಮಯ್ಯ ಇಲ್ಲಿಯೂ ಬುರುಡೆ ಬಿಟ್ಟಿದ್ದಾರೆ. ದಲಿತರು ಸಿಎಂ ಆದರೆ ಸ್ವಾಗತ, ಆದರೆ ಅವರೂ ದಲಿತರಂತೆ… ಹಾಗಾದರೆ ಸಿದ್ದರಾಮಯ್ಯ ಹೇಳುತ್ತಿರುವುದೇನು? ಎಂದು ಪ್ರಶ್ನಿಸಿದೆ.
ಹುಚ್ಚು ನಾಯಿ ಕಡಿತಕ್ಕೆ ಇಲ್ಲಿದೆ ಪ್ರಥಮ ಚಿಕಿತ್ಸೆ
ಆತ್ಮವಂಚಕ ಸಿದ್ದರಾಮಯ್ಯ ಅವರ ಮಾತು ನಂಬಿಕೆಗೆ ಯೋಗ್ಯವೇ? ಈ ಹಿಂದೆ ಇದೇ ನನ್ನ ಕೊನೇ ಚುನಾವಣೆ ಎಂದು ಘೋಷಿಸಿ ಎರಡು ಕಡೆ ಚುನಾವಣೆಗೆ ನಿಂತರು. ಈಗ ಇನ್ನೊಂದು ರೀತಿ ಹೇಳಿಕೆ ಕೊಡುತ್ತಿದ್ದಾರೆ. ಇದು ಎಲ್ಲ ನಿಯಮಗಳಿಗೂ ಅಪವಾದವಿರುತ್ತದೆ. ಇದೊಂದು ನಿಯಮ. ಹೀಗಾಗಿ ಕೆಲವು ನಿಯಮಗಳಿಗೆ ಅಪವಾದವಿರುವುದಿಲ್ಲ ಎಂಬ ತರ್ಕ ಪಂಡಿತನ ವಾದ ಗೊತ್ತೇ? ಸಿದ್ದರಾಮಯ್ಯ ಅವರ ಕತೆಯೂ ಹೀಗೆಯೇ ಆಗಿದೆ. ದಲಿತರು ಸಿಎಂ ಆದರೆ ಸ್ವಾಗತ, ನಾನೂ ಒಬ್ಬ ದಲಿತ. ಹಾಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾನೇ ಮುಖ್ಯಮಂತ್ರಿ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದೆ.