ಮೈಸೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಮೈಸೂರು ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಸಿಇಒ ಗಿರೀಶ್ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಗುತ್ತಿಗೆದಾರ ಚರಣ್ ಎಂಬುವವರಿಗೆ ಕಾರ್ಯಾದೇಶ ನೀಡಲು ಗಿರೀಶ್, 1 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಕಚೇರಿಯಲ್ಲಿಯೇ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ನೀವೂ ಬಳಸ್ತೀರಾ ಈ ಪಾಸ್ ವರ್ಡ್…? ಹಾಗಾದ್ರೆ ಇರಲಿ ಎಚ್ಚರ
ಗಿರೀಶ್ ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಕೆ ಎ ಎಸ್ ಅಧಿಕಾರಿ ರಂಗನಾಥ್ ನಿವಾಸದ ಮೇಲೆ ಎಸಿಬಿ ದಾಳಿ ವೆಳೆಯೇ ಅತ್ತ ಮೈಸೂರಿನಲ್ಲಿ ಸಿಇಒ ಗಿರೀಶ್ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ.