ಒಂದು ಕಾಲದಲ್ಲಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸಿವಿಲ್ ವಿಭಾಗಕ್ಕೆ ಅಪಾರ ಬೇಡಿಕೆ ಇತ್ತು. ಆದರೆ ಯಾವಾಗ ಕಂಪ್ಯೂಟರ್ ಸೈನ್ಸ್ ಪ್ರವೇಶವಾಯಿತೋ ಸಿವಿಲ್ ಸೇರಿದಂತೆ ಹಲವು ವಿಭಾಗಗಳ ಬೇಡಿಕೆ ಕುಸಿದಿತ್ತು.
ಸಿವಿಲ್ ಇಂಜಿನಿಯರಿಂಗ್ ಮಾಡಿದವರು ಫೀಲ್ಡ್ ಕೆಲಸ ಮಾಡಬೇಕಿದ್ದು, ಆದರೆ ಕಂಪ್ಯೂಟರ್ ಸೈನ್ಸ್ ಸೇರಿದಂತೆ ಕೆಲ ವಿಭಾಗಗಳಲ್ಲಿ ವ್ಯಾಸಂಗ ಮಾಡಿದವರು ಕಚೇರಿ ಅಥವಾ ಮನೆಯಲ್ಲಿ ಕುಳಿತು ಕಾರ್ಯನಿರ್ವಹಿಸುವ ಕಾರಣ ಸಹಜವಾಗಿಯೇ ಇದಕ್ಕೆ ಬೇಡಿಕೆ ಜಾಸ್ತಿ.
ಬೆಳಗಾವಿಯ ತಾಂತ್ರಿಕ ವಿಶ್ವವಿದ್ಯಾಲಯದ ಮಾಹಿತಿಯಂತೆ ವಿದ್ಯಾರ್ಥಿಗಳ ಕೊರತೆ ಕಾರಣಕ್ಕೆ ಕಳೆದ ಐದು ವರ್ಷಗಳಲ್ಲಿ ರಾಜ್ಯದ 15 ಕಾಲೇಜುಗಳು ಇಂಜಿನಿಯರಿಂಗ್ ವಿಭಾಗವನ್ನು ಮುಚ್ಚಿವೆ ಎಂಬ ಸಂಗತಿ ಬೆಳಕಿಗೆ ಬಂದಿದೆ.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೇ ನಾಲ್ಕು ಕಾಲೇಜುಗಳು ಸಿವಿಲ್ ಇಂಜಿನಿಯರಿಂಗ್ ವಿಭಾಗವನ್ನು ಮುಚ್ಚಿವೆ ಎನ್ನಲಾಗಿದ್ದು, ಕಂಪ್ಯೂಟರ್ ಸೈನ್ಸ್ ವಿಭಾಗಕ್ಕೆ ವಿದ್ಯಾರ್ಥಿಗಳ ಬೇಡಿಕೆ ಇರುವ ಕಾರಣ ಸಿವಿಲ್ ಇಂಜಿನಿಯರಿಂಗ್ ಸೀಟುಗಳನ್ನು ಇಲ್ಲಿಗೆ ವರ್ಗಾಯಿಸಲಾಗಿದೆ ಎಂದು ತಿಳಿದುಬಂದಿದೆ.
ಇನ್ನು ಕೆಲವು ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸಿವಿಲ್ ವಿಭಾಗಕ್ಕೆ ಪ್ರವೇಶ ಪಡೆಯಲು ನಿರಾಸಕ್ತಿ ತೋರುತ್ತಿರುವ ಕಾರಣ ಸೀಟುಗಳ ಸಂಖ್ಯೆಯನ್ನು ಕಡಿತಗೊಳಿಸಲಾಗಿದೆ ಎಂದು ಹೇಳಲಾಗಿದೆ.