alex Certify BIG NEWS: ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 2 ಕೋಟಿ ಹಣ ಜಪ್ತಿ; ಓರ್ವ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 2 ಕೋಟಿ ಹಣ ಜಪ್ತಿ; ಓರ್ವ ಅರೆಸ್ಟ್

ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಕುರುಡು ಕಾಂಚಾಣ, ಗಿಫ್ಟ್ ಪಾಲಿಟಿಕ್ಸ್ ಸದ್ದು ಜೋರಾಗಿದೆ. ಈ ನಡುವೆ ದಾಖಲೆ ಇಲ್ಲದೇ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬರೋಬ್ಬರಿ 2 ಕೋಟಿ ರೂಪಾಯಿ ಹಣವನ್ನು ಬೆಳಗಾವಿ ಪೊಲೀಸರು ಜಪ್ತಿ ಮಾಡಿದ್ದಾರೆ.

ಮುಂಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ನ್ನು ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಚೆಕ್ ಪೋಸ್ಟ್ ಬಳಿ ತಪಾಸಣೆ ನಡೆಸಿದಾಗ, ರಾಜಸ್ಥಾನ ಮೂಲದ ವ್ಯಕ್ತಿ ಬಳಿ 2 ಕೋಟಿ ರೂಪಾಯಿ ಹಣ ಪತ್ತೆಯಾಗಿದೆ.

ಯಾವುದೇ ಸೂಕ್ತ ದಾಖಲೆಗಳಿಲ್ಲದೇ ಇಷ್ಟೊಂದು ಪ್ರಮಾಣದ ಹಣ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ 2 ಕೋಟಿ ರೂಪಾಯಿ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ರಾಜಸ್ಥಾನ ಮೂಲದ ಮಹೇಂದ್ರ ಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ.

ಅನಧಿಕೃತ ಹಣದ ಬಗ್ಗೆ ಐಟಿ ಅಧಿಕಾರಿಗಳಿಗೆ ಮಾಹಿತಿ ನಿಡಲಾಗಿದ್ದು, ಹಿರೇಬಾಗೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...