ಬೀದರ್: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದು, ಅಕ್ರಮ ಸಾಗಾಟಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಮಹಾರಾಷ್ಟ್ರದಿಂದ ರಾಜ್ಯಕ್ಕೆ ಅಪಾರ ಪ್ರಮಾಣದ ದಾಖಲೆ ಇಲ್ಲದ ಹಣ, ಬೆಳ್ಳಿ, ಬಂಗಾರಗಳು ಹರಿದು ಬರುತ್ತಿದ್ದು, ಚುನಾವಣಾಧಿಕಾರಿಗಳು ಇವುಗಳನ್ನು ಜಪ್ತಿ ಮಾಡುತ್ತಿದ್ದಾರೆ.
ಬೀದರ್ ಜಿಲ್ಲೆಯ ಔರಾದ್ ನ ಮಾನಮಾರಪಳ್ಳಿ ಚೆಕ್ ಪೋಸ್ಟ್ ಬಳಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 1 ಕೋಟಿ 43 ಸಾವಿರ ರೂ ಮೌಲ್ಯದ 142 ಕೆಜಿ ಬೆಳ್ಳಿಯನ್ನು ವಶಕ್ಕೆ ಪಡೆದಿದ್ದಾರೆ.
ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಬೆಳ್ಳಿ ಸಾಗಿಸುತ್ತಿದ್ದಾಗ ಚೆಕ್ ಪೋಸ್ಟ್ ನಲ್ಲಿ ವಾಹನ ಪರಿಶೀಲನೆ ನಡೆಸಿದಾಗ ಅಪಾರ ಪ್ರಮಾಣದ ಬೆಳ್ಳಿ ಪತ್ತೆಯಾಗಿದೆ. ಬೆಳ್ಳಿ ವಶಕ್ಕೆ ಪಡೆದು, ಇಬ್ಬರನ್ನು ಬಂಧಿಸಿ ಎಫ್ ಐ ಆರ್ ದಾಖಲಿಸಿದ್ದಾರೆ. ಗಜಾನನ, ರಾಹುಲ್ ಎಂಬುವವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.