ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 1,968 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮಹಾನವಮಿ, ವಿಜಯದಶಮಿ ಸಂದರ್ಭದಲ್ಲಿ ದೇಶದ ಜನರು ನೆಮ್ಮದಿಯಿಂದ ಹಬ್ಬ ಆಚರಣೆ ಮಾಡುವಂತಾಗಿದೆ.
ದೇಶದಲ್ಲಿ ಈವರೆಗೆ 5,28,716 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 34,598 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.74ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,36,152 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 3,44,525 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,18,80,50,600 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,09,801 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.