ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ ಕೇವಲ 294 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಈವರೆಗೆ 5,30,591 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 6,209 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.79ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,32,915 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 74,386 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,87,12,952 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,83,709 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.