alex Certify BIG NEWS: ದಾಖಲೆ ಸಮೇತ ಸಚಿವರೊಬ್ಬರ ಅಕ್ರಮ ಇಂದು ಬಯಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಾಖಲೆ ಸಮೇತ ಸಚಿವರೊಬ್ಬರ ಅಕ್ರಮ ಇಂದು ಬಯಲು

ಕಳೆದ ಕೆಲವು ದಿನಗಳಿಂದ ಸದನದಲ್ಲಿಯೇ ರಾಜ್ಯ ಸರ್ಕಾರದ ಸಚಿವರೊಬ್ಬರ ಅಕ್ರಮವನ್ನು ದಾಖಲೆ ಸಮೇತ ಬಯಲು ಮಾಡುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಈಗ ಅದಕ್ಕೆ ಮುಹೂರ್ತ ನಿಗದಿಪಡಿಸಿದ್ದಾರೆ.

ಇಂದು ಆ ಸಚಿವರ ಅಕ್ರಮವನ್ನು ದಾಖಲೆ ಸಮೇತ ಬಯಲು ಮಾಡುವುದಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾತನಾಡುವ ವೇಳೆ ಕುಮಾರಸ್ವಾಮಿ ತಿಳಿಸಿದ್ದಾರೆ.

ನಾನು ದಾಖಲೆ ಇಲ್ಲದೆ ಏನನ್ನೂ ಮಾತನಾಡುವುದಿಲ್ಲ. ಗಾಳಿಯಲ್ಲಿ ಗುಂಡು ಹಾರಿಸುವ ಜಾಯಮಾನ ನನ್ನದಲ್ಲ ಎಂದು ಹೇಳಿದ ಕುಮಾರಸ್ವಾಮಿಯವರು, ಗುರುವಾರದವರೆಗೆ ಕಾಯಿರಿ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...