ದಾವಣಗೆರೆ: ದಾವಣಗೆರೆ ಜಿಲ್ಲೆಯ ಮಿಟ್ಲಕಟ್ಟೆ ಗ್ರಾಮದಲ್ಲಿರುವ ದಿ ಸ್ಟೇಜ್ ಹೋಟೆಲ್ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ವೀಕೆಂಡ್ ಪಾರ್ಟಿಯಲ್ಲಿ ತೊಡಗಿದ್ದ ಯುವಕ-ಯುವತಿಯರಿಗೆ ಶಾಕ್ ನೀಡಿದ್ದಾರೆ.
ದಿ ಸ್ಟೇಜ್ ಹೋಟೆಲ್ ನಲ್ಲಿ ವೀಕೆಂಡ್ ನಲ್ಲಿ ಶುಕ್ರವಾರ ರಾತ್ರಿಯಿಂದ ಭಾನುವಾರದ ವರೆಗೂ ಪ್ರತಿವಾರ ಡ್ರಿಂಕ್ಸ್ ಪಾರ್ಟಿ ಆಯೋಜನೆ ಮಾಡಲಾಗುತ್ತದೆ. ಕಪಲ್ಸ್ ಗಳಿಗೆ ಮಾತ್ರ ಹೋಟೆಲ್ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಆದರೆ ತಡರಾತ್ರಿ ನಡೆದ ಪಾರ್ಟಿಯಲ್ಲಿ ಡಿಜೆ ಸಾಂಗ್, ಡ್ರಿಂಕ್ಸ್ ಜತೆ ಮಾದಕ ವಸ್ತು ಸೇವನೆ ಕೂಡ ಮಾಡಲಾಗುತ್ತಿದೆ ಎಂಬ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು ಎನ್ನಲಾಗಿದೆ.
ಖಚಿತ ಮಾಹಿತಿ ಹಿನ್ನೆಲೆಯಲ್ಲಿ ತಡರಾತ್ರಿ 2 ಗಂಟೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸರು ದಾಳಿ ನಡೆಸುತ್ತಿದ್ದಂತೆ ನಶೆಯಲ್ಲಿದ್ದ ಯುವಕ-ಯುವತಿಯರು ಹೋಟೆಲ್ ನಿಂದ ಜಾಗ ಖಾಲಿ ಮಾಡಿದ್ದಾರೆ. ದಾಳಿ ವೇಳೆ ಪೊಲೀಸರು ಯಾರನ್ನೂ ಬಂದಿಸಿಲ್ಲ, ಕೇವಲ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.