alex Certify BIG NEWS: ದೀಪಾವಳಿ ಮುಗಿದ ಬೆನ್ನಲ್ಲೇ ಮತ್ತೆ ಹೆಚ್ಚಿದ ಕೊರೊನಾ ಸಂಖ್ಯೆ; ಒಂದೇ ದಿನದಲ್ಲಿ ಪತ್ತೆಯಾದ ಕೇಸ್ ಗಳೆಷ್ಟು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೀಪಾವಳಿ ಮುಗಿದ ಬೆನ್ನಲ್ಲೇ ಮತ್ತೆ ಹೆಚ್ಚಿದ ಕೊರೊನಾ ಸಂಖ್ಯೆ; ಒಂದೇ ದಿನದಲ್ಲಿ ಪತ್ತೆಯಾದ ಕೇಸ್ ಗಳೆಷ್ಟು…?

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ದೀಪಾವಳಿ ಹಬ್ಬ ಮುಗಿದ ಬೆನ್ನಲ್ಲೇ ಹಾಗೂ ಚಳಿಗಾಲ ಕೂಡ ಆರಂಭವಾಗಿರುವುದರಿಂದ ಕೊರೊನಾ ಸೋಂಕಿತರ ಪತ್ತೆ ಸಂಖ್ಯೆಯಲ್ಲಿ ಮತ್ತೆ ಕೊಂಚ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 45,576 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 89,58,484ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 585 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,31,578 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,43,303 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 83,83,603 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 48,493 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ದೇಶದಲ್ಲಿ ನಿನ್ನೆಯೊಂದೇ ದಿನದಲ್ಲಿ 10,28,203 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 12,85,08,389 ಜನರನ್ನು ಸ್ಯಾಂಪಲ್ ಟೆಸ್ಟ್ ಗೆ ಒಳಪಡಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...