ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ದೂರಿಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನವದೆಹಲಿಯಲ್ಲಿ ಇಂದು ಇಡಿ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ.
ನ್ಯಾಯಾಧೀಶ ವಿಕಾಸ್ ಧೂಲ್ ಅವರ ಮುಂದೆ ಹಾಜರಾದ ಡಿ.ಕೆ. ಶಿವಕುಮಾರ್, ಕಾರ್ಯಕ್ರಮ ಒಂದರಲ್ಲಿ ಭಾಗವಹಿಸುವ ಸಲುವಾಗಿ ತಾವು ದುಬೈಗೆ ತೆರಳಬೇಕಾಗಿದ್ದು, ಇದಕ್ಕೆ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್ ವಿಚಾರಣೆ ಕುರಿತಂತೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರಲ್ಲದೆ, ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ದಾಖಲೆ ನೀಡುತ್ತಿಲ್ಲ ಎಂದು ಹೇಳಿದರು.