ಬೆಳಗಾವಿ: ಮಹಾ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿಯುಂಟಾಗಿದೆ. 40ಕ್ಕೂ ಹೆಚ್ಚು ಗ್ರಾಮಗಳು ಜಲಾವೃತಗೊಂಡಿವೆ. ಮೀನುಗಾರರು ನದಿಗಳಿಗೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದರೂ ಕೆಲವರ ಬೇಜವಾಬ್ದಾರಿ ಮಾತ್ರ ಮುಂದುವರೆದಿದೆ.
ಮೀನುಗಾರಿಕೆಗೆಂದು ದೂದ್ ಗಂಗಾ ನದಿಗೆ ತೆರಳಿದ್ದ ವ್ಯಕ್ತಿಯೋರ್ವ ಪ್ರವಾಹದ ಹೊಡೆತಕ್ಕೆ ಸಿಲುಕಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಮಾಂಗೂರು ಗ್ರಾಮದಲ್ಲಿ ನಡೆದಿದೆ.
ಶಿವಾಜಿ ಪೂರ್ವಿ (55) ಮೃತ ವ್ಯಕ್ತಿ. ಮೀನು ಹಿಡಿಯಲು ದೂದ್ ಗಂಗಾ ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಶಿವಾಜಿ ಮೃತದೇಹ ಹೊರತೆಗೆದಿದ್ದಾರೆ.