ಬೆಂಗಳೂರು; ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ದೆಹಲಿಗೆ ದೌಡಾಯಿಸಿದ್ದು, ವರಿಷ್ಠರ ಭೇಟಿಗೆ ಮುಂದಾಗಿದ್ದಾರೆ ಎನ್ನಲಾಗಿದೆ.
ಸಚಿವ ಸ್ಥಾನ ಕೈತಪ್ಪಿರುವ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಸಿ.ಪಿ.ಯೋಗೇಶ್ವರ್, ಕರ್ನಾಟಕ ಭವನದಲ್ಲಿ ಬೀಡು ಬಿಟ್ಟಿದ್ದು, ಸಂಜೆ ವೇಳೆಗೆ ಬಿಜೆಪಿ ಪ್ರಮುಖ ನಾಯಕರನ್ನು ಭೇಟಿಯಾಗಿ, ತಮ್ಮ ಅಸಮಾಧಾನ ವ್ಯಕ್ತಪಡಿಸಿ, ಮಂತ್ರಿ ಸ್ಥಾನ ನೀಡುವಂತೆ ಮನವಿ ಮಾಡಲಿದ್ದಾರೆ ಎನ್ನಲಾಗಿದೆ.
ನೌಕರರಿಗೆ ಕೇಂದ್ರ ಸರ್ಕಾರ ನೀಡಿದೆ ದೊಡ್ಡ ಉಡುಗೊರೆ
ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಿದ್ದ ಸಿ.ಪಿ.ಯೋಗೇಶ್ವರ್ ಗೆ ಹೊಸ ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿದ್ದು, ಮತ್ತೆ ಸಚಿವ ಸ್ಥಾನ ಗಿಟ್ಟಿಸಿಕೊಳ್ಳುವ ನಿಟ್ಟಿನಲ್ಲಿ ಕಸರತ್ತು ನಡೆಸಿದ್ದಾರೆ.