alex Certify BIG NEWS: ದೆಹಲಿಗೆ ಪ್ರಯಾಣಿಸಿದ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೆಹಲಿಗೆ ಪ್ರಯಾಣಿಸಿದ ಸಿದ್ದರಾಮಯ್ಯ

ಕರ್ನಾಟಕ ಚುನಾವಣಾ ಫಲಿತಾಂಶ: ಸಿದ್ದರಾಮಯ್ಯ ಅವರ ಮೊದಲ ಪ್ರತಿಕ್ರಿಯೆ..

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಗೆದ್ದು ಬೀಗಿದೆ. ಆದರೆ ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಬ್ಬರಲ್ಲಿ ಯಾರನ್ನು ಸಿಎಂ ಮಾಡಬೇಕು ಎಂಬುದೇ ಹೈಕಮಾಂಡ್ ಗೆ ತಲೆನೋವಾಗಿ ಪರಿಣಮಿಸಿದೆ.

ಈ ಬೆಳವಣಿಗೆ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣಿಸಿದ್ದಾರೆ. ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದು, ಸಿದ್ದರಾಮಯ್ಯಗೆ ಶಾಸಕ ಜಮೀರ್ ಅಹ್ಮದ್ ಸಾಥ್ ನೀಡಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಲಿರುವ ಸಿದ್ದರಾಮಯ್ಯ, ಹೈಕಮಾಂಡ್ ಜೊತೆ ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಚರ್ಚೆ ನಡೆಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...