ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಆಯ್ಕೆಗಾಗಿ ಕಾಂಗ್ರೆಸ್ ನಲ್ಲಿ ರಾಜಕೀಯ ಗರಿಗೆದರಿದ್ದು, ದೆಹಲಿಯಲ್ಲಿ ಕೈ ನಾಯಕರ ಮ್ಯಾರಥಾನ್ ಮೀಟಿಂಗ್ ನಡೆದಿದೆ.
ಹೈಕಮಾಂಡ್ ಭೇಟಿಗಾಗಿ ಆಪ್ತ ಶಾಸಕರೊಂದಿಗೆ ದೆಹಲಿಗೆ ತೆರಳಿರುವ ಮಾಜಿ ಸಿಎಂ ಸಿದ್ದರಾಮಯ್ಯ ರಹಸ್ಯ ಸಭೆ ನಡೆಸಿದ್ದಾರೆ.
ಹೈಕಮಾಂಡ್ ಭೇಟಿಗೂ ಮುನ್ನ ಸಿದ್ದರಾಮಯ್ಯ ತಮ್ಮ ಬೆಂಬಲಿಗ ಶಾಸಕರೊಂದಿಗೆ ಮಹತ್ವದ ಸಭೆ ನಡೆಸಿದ್ದು, ಸಭೆಯಲ್ಲಿ ಎಂ.ಬಿ. ಪಾಟೀಲ್, ಜಮೀರ್ ಅಹ್ಮದ್, ಬೈರತಿ ಸುರೇಶ್, ಯತೀಂದ್ರ ಸಿದ್ದರಾಮಯ್ಯ, ಕೆ.ಜೆ. ಜಾರ್ಜ್ ಮೊದಲಾದವರು ಭಾಗಿಯಾಗಿದ್ದಾರೆ.