alex Certify BIG NEWS: ದೆಹಲಿಯಲ್ಲಿ ಸಿಎಂ ಬೊಮ್ಮಾಯಿ ಭೇಟಿಯಾದ ರಮೇಶ್ ಜಾರಕಿಹೊಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೆಹಲಿಯಲ್ಲಿ ಸಿಎಂ ಬೊಮ್ಮಾಯಿ ಭೇಟಿಯಾದ ರಮೇಶ್ ಜಾರಕಿಹೊಳಿ

ನವದೆಹಲಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ನೂತನ ರಾಷ್ಟ್ರಪತಿ ಅಧಿಕಾರ ಸ್ವೀಕಾರ ಸಮಾರಂಭ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಸಿಎಂ ಬಸವರಾಜ್ ಬೊಮ್ಮಾಯಿ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಿದ್ದಾರೆ. ಇದೇ ವೇಳೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೂಡ ದೆಹಲಿಗೆ ತೆರಳಿದ್ದು, ಕರ್ನಾಟಕ ಭವದಲ್ಲಿ ಸಿಎಂ ಬೊಮ್ಮಾಯಿ ಭೇಟಿಯಾಗಿ ಕೆಲ ಕಾಲ ಸಮಾಲೋಚನೆ ನಡೆಸಿದರು.

ದೆಹಲಿಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಜಾರಕಿಹೊಳಿ ಭೇಟಿಯಾಗಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ನಾಳೆ ಕೇಂದ್ರ ಸಚಿವರು ಹಾಗೂ ಬಿಜೆಪಿ ವರಿಷ್ಠರನ್ನು ಭೇಟಿಯಾಗಲಿದ್ದು, ಇದೇ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ಸಿಎಂ ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...