ರಾಜಧಾನಿ ದೆಹಲಿಯಲ್ಲಿ ಕೊರೊನಾ ಪ್ರಕರಣಗಳು ವೇಗವಾಗಿ ಏರಿಕೆಯಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ. 4 ತಿಂಗಳ ಪುಟ್ಟ ಕಂದಮ್ಮನಿಗೆ ಕೊರೊನಾ ಸೋಂಕು ತಗುಲಿದ್ದು, ಆತಂಕ ಮೂಡಿಸಿದೆ.
ದೆಹಲಿಯ ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ಒಟ್ಟು 7 ಕೊರೊನಾ ಸೋಂಕಿತರು ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಇವರಲ್ಲಿ 5 ವಯಸ್ಕರು ಮತ್ತು ಇಬ್ಬರು ಮಕ್ಕಳಿದ್ದಾರೆ. ಪಾಸಿಟಿವ್ ಇರುವ ಒಂದು ಮಗುವಿಗೆ ಕೇವಲ 4 ತಿಂಗಳು. ಸದ್ಯ ಮಗುವಿಗೆ ಆಕ್ಸಿಜನ್ ಸಪೋರ್ಟ್ ನೀಡಲಾಗಿದೆ. ಹಸುಗೂಸಿನ ಸ್ಥಿತಿ ಚಿಂತಾಜನಕವಾಗಿ ಎಂದು ಹೇಳಲಾಗ್ತಿದೆ.
ಮಗುವಿನ ತಂದೆ ಕೂಡ ಕೋವಿಡ್ ಪಾಸಿಟಿವ್ ಆಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೋಷಕರು ಲಸಿಕೆ ಹಾಕಿಸಿಕೊಳ್ಳದಿದ್ದರೆ ಮಕ್ಕಳಿಗೆ ಸೋಂಕು ತಗುಲಬಹುದು ಎಂದು ವೈದ್ಯರು ಎಚ್ಚರಿಸಿದ್ದಾರೆ. ಸದ್ಯ ದೆಹಲಿಯಲ್ಲಿ ಕೋವಿಡ್ ಸೋಂಕಿನ ಪ್ರಮಾಣವು ಶೇ.5 ಕ್ಕಿಂತ ಹೆಚ್ಚಿದೆ. ಆದ್ರೆ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಕಡಿಮೆ ಇದೆ.