ನವದೆಹಲಿ: ದೆಹಲಿಯ ಕರ್ನಾಟಕ ಸಂಘದ ಅಮೃತ ಮಹೋತ್ಸವವನ್ನು ನಗಾರಿ ಬಾರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.
ದೆಹಲಿಯ ಟಾಲ್ಕಟೋರಾ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದರು. ಇದಕ್ಕೂ ಮುನ್ನ ಪ್ರಧಾನಿ ಮೋದಿಯವರಿಗೆ ಟಾಲ್ಕಟೊರಾ ಒಳಾಂಗಣ ಮೈದಾನದಲ್ಲಿ ಪೂರ್ಣಕುಂಭ ಸ್ವಾಗತ ಕೋರಲಾಯಿತು.
ರಾಷ್ಟ್ರ ರಾಜಧಾನಿಯಲ್ಲಿ ಕನ್ನಡದ ಕಲರವ ಮೊಳಗಿದ್ದು, ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, ಸಚಿವ ಪ್ರಹ್ಲಾದ್ ಜೋಶಿ, ಸಿ.ಟಿ. ರವಿ, ಸುತ್ತೂರು ಶ್ರೀಗಳು, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮಿಜಿ, ನಂಜಾವಧೂತಶ್ರಿ, ಪೇಜಾವರದ ವಿಶ್ವಪ್ರಸನ್ನ ತೀರ್ಥರು, ಯದುವೀರ್ ಕೃಷ್ಣದತ್ತ ಒಡೆಯರ್ ಸೇರಿದಂತೆ ಹಲವರು ಭಾಗವಹಿಸಿದ್ದಾರೆ.