ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ರಾಜ್ಯದಲ್ಲಿ ಭರ್ಜರಿ ಸಿದ್ಧತೆ ನಡೆಸಿರುವ ಆಮ್ ಆದ್ಮಿ ಪಕ್ಷ, ಕರ್ನಾಟಕದಲ್ಲಿ ಅಧಿಕಾರದ ಗದ್ದುಗೆ ಏರಲು ಯೋಜನೆ ರೂಪಿಸಿದೆ. ಈ ನಿಟ್ಟಿನಲ್ಲಿ ಆಪ್ ಸಮಾವೇಶ ನಡೆಯುತ್ತಿದ್ದು, ಆಮ್ ಆದ್ಮಿ ಮೂರನೇ ಸರ್ಕಾರ ಕರ್ನಾಟಕದಲ್ಲಿ ರಚಿಸಲಿದ್ದೇವೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ಆಮ್ ಆದ್ಮಿ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಕೇಜ್ರಿವಾಲ್, ದೆಹಲಿ, ಪಂಜಾಬ್ ನಲ್ಲಿ ಅಧಿಕಾರಕ್ಕೇರಿದ ಬಳಿಕ ಇದೀಗ ಕರ್ನಾಟಕ ನಮ್ಮ ಗುರಿಯಾಗಿದ್ದು, ಆಮ್ ಆದ್ಮಿ ಪಕ್ಷ ತನ್ನ ಮೂರನೇ ಸರ್ಕಾರವನ್ನು ಕರ್ನಾಟಕದಲ್ಲಿ ರಚಿಸಲಿದೆ ಎಂದರು.
ಮನಃಸ್ಥಿತಿ ಬದಲಿಸಿಕೊಳ್ಳದಿದ್ದರೆ ಇಲ್ಲಿಯೂ ಬುಲ್ಡೋಜರ್ ಬರಲಿದೆ: ಗಲಭೇಕೋರರಿಗೆ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ದೆಹಲಿಯಲ್ಲಿ 0% ಸರ್ಕಾರವಿದ್ದರೆ ಇಲ್ಲಿರುವುದು 40% ಸರ್ಕಾರ. ಭ್ರಷ್ಟಾಚಾರ ಮುಕ್ತ ಸರ್ಕಾರ ಮಾತ್ರ ಜನರಿಗೆ ಉತ್ತಮ ಆಡಳಿತ ನೀಡಲು ಸಾಧ್ಯ. ದೇಶಾದ್ಯಂತ ರೈತರು ಒಗ್ಗಟ್ಟಾಗಿ ಬಿಜೆಪಿ ತೊಲಗಿಸಿ ಎಂದು ಕರೆ ನೀಡಿದರು.
ಹಲವು ವರ್ಷಗಳಿಂದ ಎದುರಿಸುತ್ತಿರುವ ಆರ್ಥಿಕ ಸಂಕಷ್ಟದ ಹೊರತಾಗಿಯೂ ದೆಹಲಿಯ ಜನರಿಗೆ ಶಿಕ್ಷಣ, ಆರೋಗ್ಯ, ವಿದ್ಯುತ್, ನೀರು, ಮಹಿಳೆಯರಿಗೆ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಇದಕ್ಕೆ ಕಾರಣ ಪ್ರಾಮಾಣಿಕವಾದ ಆಡಳಿತ ಎಂದರು.
ಬಿಜೆಪಿ ಅತ್ಯಾಚಾರಿಗಳನ್ನು, ಗೂಂಡಾಗಳನ್ನು ಪಕ್ಷಕ್ಕೆ ಸ್ವಾಗತಿಸುತ್ತದೆ. ಗಲಭೆ, ಅಶಾಂತಿಗಳಿಗೆ ಪ್ರಚೋದನೆಯನ್ನು ನೀಡುತ್ತಿದೆ. ಆದರೆ ಆಮ್ ಆದ್ಮಿ ಪಕ್ಷ ಸಜ್ಜನರ, ದೇಶ ಭಕ್ತರ, ಪ್ರಾಮಾಣಿಕರ ಪಕ್ಷವಾಗಿದೆ, ದೇಶದ ಜನತೆ ಶಾಂತಿ, ನೆಮ್ಮದಿಯಿಂದ ಬದುಕಲು ಇಚ್ಚಿಸುತ್ತಾರೆ. ಗಲಭೆ, ಅಶಾಂತಿ ಬೇಕಿದ್ದರೆ ಬಿಜೆಪಿಗೆ ಮತ ಹಾಕಿ, ಶಾಂತಿ, ಶಿಕ್ಷಣ, ಅಭಿವೃದ್ಧಿ ಬೇಕಿದ್ದರೆ ಆಮ್ ಆದ್ಮಿ ಪಕ್ಷಕ್ಕೆ ಮತ ನೀಡಿ ಎಂದು ಹೇಳಿದರು.