ನವದೆಹಲಿ: ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚೆ, ಸಂಪುಟ ಪುನಾರಚನೆಗೆ ಸಮ್ಮತಿ ಸೇರಿದಂತೆ ದೆಹಲಿ ನಾಯಕರೊಂದಿಗಿನ ಯಶಸ್ವಿ ಮಾತುಕತೆಯೊಂದಿಗೆ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯಕ್ಕೆ ವಾಪಸ್ಸಾಗುತ್ತಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಬಳಿಕ ಸಂಪುಟ ವಿಸ್ತರಣೆ ಮಾಡಲಾಗುತ್ತದೆ. ಈಗಾಗಲೇ ಸಂಪುಟ ವಿಸ್ತರಣೆ ವಿಚಾರವಾಗಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಜತೆ ಚರ್ಚೆ ನಡೆಸಲಾಗಿದೆ. ವರಿಷ್ಠರು ಮಾಹಿತಿ ಪಡೆದುಕೊಂಡಿದ್ದಾರೆ ಎಂದರು.
ಹೆಣ್ಣು ಮಕ್ಕಳಿಲ್ಲವೆಂದು ದತ್ತು ಪಡೆದು ಚಿತ್ರಹಿಂಸೆ ನೀಡಿದ ಪೋಷಕರು..!
ಕೇಂದ್ರ ಸಚಿವ ಅಮಿತ್ ಶಾ ಅವರ ಭೇಟಿ ಸಾಧ್ಯವಾಗಿಲ್ಲ, ಅಮಿತ್ ಶಾ ಹಾಗೂ ಬಿ.ಎಲ್.ಸಂತೋಷ್ ಅವರೊಂದಿಗೆ ಚರ್ಚೆ ನಡೆಸಬೇಕಿದೆ. ನಂತರ ಸಂಪುಟ ವಿಸ್ತರಣೆ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದರು.