ಬೆಂಗಳೂರು: ದೇವರಾಜ್ ಅರಸು ಟ್ರಕ್ ಟರ್ಮಿನಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಶಾಂತಿನಗರದಲ್ಲಿರುವ ಟ್ರಕ್ ಟರ್ಮಿನಲ್ಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ನಕಲಿ ದಾಖಲೆ ಸೃಷ್ಟಿಸಿ ಕೋಟಿಗಟ್ಟಲೆ ಬಿಲ್ ಮಂಜೂರು ಮಾಡಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ದೇವರಾಜ್ ಅರಸು ಟ್ರಕ್ ಟರ್ಮಿನಲ್ಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.