alex Certify BIG NEWS: ದೇವಾಲಯಗಳ ತೆರವು ವಿಚಾರ; ಸಿದ್ದರಾಮಯ್ಯ ವಿರುದ್ಧ ಸಂಸದ ಪ್ರತಾಪ್ ಸಿಂಹ ಆಕ್ರೋಶ; ಅಧಿಕಾರಿಗಳಿಗೂ ಕ್ಲಾಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇವಾಲಯಗಳ ತೆರವು ವಿಚಾರ; ಸಿದ್ದರಾಮಯ್ಯ ವಿರುದ್ಧ ಸಂಸದ ಪ್ರತಾಪ್ ಸಿಂಹ ಆಕ್ರೋಶ; ಅಧಿಕಾರಿಗಳಿಗೂ ಕ್ಲಾಸ್

ಮೈಸೂರು: ರಾಜ್ಯದಲ್ಲಿ ದೇವಾಲಯಗಳ ತೆರವು ವಿಚಾರವಾಗಿ ಲೋಪವಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಸರಿಯಾಗಿ ಅರ್ಥೈಸಿಕೊಂಡಿಲ್ಲ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಲೋಪವಾಗಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೂ ಲೋಪವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಓರ್ವ ವಕೀಲರಾಗಿದ್ದವರು. ಆದರೂ ಯಾಕೆ ಈ ಬಗ್ಗೆ ಗಮನ ಹರಿಸಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಜನರ ಮೇಲೆ ಪ್ರೀತಿ, ಕಾಳಜಿ ಇದ್ದರೆ ಸಿದ್ದರಾಮಯ್ಯನವರು ಟಿಪ್ಪು ಸುಲ್ತಾನ್ ಜಯಂತಿ ಮಾಡುತ್ತಿರಲಿಲ್ಲ. ಲಿಂಗಾಯಿತರನ್ನು ಒಡೆಯುವ ಕೆಲಸ ಮಾಡುತ್ತಿರಲಿಲ್ಲ. ಸುಮ್ಮನೇ ಪ್ರೀತಿ, ವಿಶ್ವಾಸ, ನಂಬಿಕೆ ಎಂದು ನಾಟಕವಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇಂದು ಪಾಕ್ ಹಾಗೂ ಕಿವೀಸ್ ನಡುವಣ ಮೊದಲ ಏಕದಿನ ಪಂದ್ಯ

ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೇ ಕೋರ್ಟ್ ಆದೇಶ ನೀಡಿತ್ತು. ನೀವು ವಕೀಲರಾಗಿದ್ದೀರಿ. ಯಾಕೆ ಗಮನಹರಿಸಿಲ್ಲ ? ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೂ ಲೋಪವಾಗಿದೆ, ಕಾಂಗ್ರೆಸ್ ಸರ್ಕಾರ ಇದ್ದಾಗಲೂ ಲೋಪವಾಗಿದೆ. ಅಧಿಕಾರಿಗಳ ತಪ್ಪಿನಿಂದ ಈಗ ರಾಜಕಾರಣಿಗಳಿಂದ ಪರಸ್ಪರ ಆರೋಪ – ಪ್ರತ್ಯಾರೋಪ ಮಾಡಲಾಗುತ್ತಿದೆ. ಇದನ್ನೇ ಮಾಡಿಕೊಂಡು ಕಾಲಹರಣ ಮಾಡುವುದು ಬೇಡ. ಸಿದ್ದರಾಮಯ್ಯನವರೇ ನಿಮ್ಮ ಕಾಲದಲ್ಲಿಯೇ ಲೋಪವನ್ನು ಸರಿಪಡಿಸಬಹುದಿತ್ತು. ಈಗ ಅನಗತ್ಯ ಆರೋಪಗಳು ಬೇಡ ತಪ್ಪು ಎಲ್ಲ ಕಡೆಯಿಂದ ಆಗಿದೆ. ಅದನ್ನು ಒಪ್ಪಿಕೊಂಡು ನೀವು ನೀವು ಹೊಡೆದಾಡದೇ ಎಲ್ಲರ ಭಾವನೆಗಳನ್ನು ಗೌರವಿಸಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಧಾರ ಕೈಗೊಳ್ಳಿ ಎಂದು ಹೇಳಿದರು.

ಹರದನಹಳ್ಳಿ ಮಹದೇವಮ್ಮ ದೇಗುಲ ತೆರವು ವೇಳೆ ನಿಯಮಗಳನ್ನು ಪಾಲನೆ ಮಾಡಿಲ್ಲ. ಹೀಗಾಗಿ ಕ್ರಮ ಕೈಗೊಳ್ಳುವಂತೆ ಸಿಎಂ ಅವರಿಗೆ ದೂರು ನೀಡಿದ್ದೇನೆ. ನನಗೆ ಸಿಎಂ ಬೊಮ್ಮಾಯಿ ಮೇಲೆ ವಿಶ್ವಾಸವಿದೆ ಅವರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದರು. ಇದೇ ವೇಳೆ ನಾನು ಜಿಲ್ಲಾಡಳಿತವನ್ನು ತರಾಟೆಗೆ ತೆಗೆದುಕೊಂಡಿದ್ದು ನಿಜ. ಸುಪ್ರೀಂ ಕೋರ್ಟ್ ಆದೇಶ ಸರಿಯಾಗಿ ಪಾಲಿಸಿಲ್ಲ ಎಂದು ಕಿಡಿಕಾರಿದ್ದೇನೆ. ಸಾರ್ವಜನಿಕ ಸ್ಥಳದ ಧಾರ್ಮಿಕ ಕಟ್ಟಡಗಳ ಮಾಹಿತಿಯನ್ನು 8 ವಾರದಲ್ಲಿ ನೀಡುವಂತೆ ಸೂಚಿಸಲಾಗಿತ್ತು. ಆದರೆ ಅಧಿಕಾರಿಗಳು ತರಾತುರಿಯಲ್ಲಿ ಪಟ್ಟಿ ನೀಡಿದ್ದಾರೆ. ಇನ್ನು ರಾಜಕಾರಣಿಗಳು ಅನ್ ಅಪ್ ಡೇಟ್ ರಾಜಕಾರಣಿಗಳಾಗಬಾರದು. ಅಧಿಕಾರಿಗಳು ವಿದ್ಯಾವಂತರು, ಸಿಎಸ್ ಅವರಿಗೂ ಸುದೀರ್ಘ ಅನುಭವವಿರುತ್ತದೆ ಕೋರ್ಟ್ ಆದೇಶ ಅರ್ಥ ಮಾಡಿಕೊಂಡು ರಾಜ್ಯ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಬೇಕಾಗಿತ್ತು ಎಂದು ಗುಡುಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...