ದೇವಾಲಯದ ರಥ ಉರುಳಿ ಬಿದ್ದ ಪರಿಣಾಮ ಇಬ್ಬರು ಭಕ್ತರು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ನಡೆದಿದೆ.
ವೈಶಾಖಿ ಹಬ್ಬದ ಅಂಗವಾಗಿ ಕಾಳಿಯಮ್ಮನ ದೇವಸ್ಥಾನದ ಮೂವತ್ತು ಅಡಿ ಎತ್ತರದ ಅಲಂಕೃತ ರಥವನ್ನು ದೇವಾಲಯದ ಸುತ್ತಮುತ್ತಲಿನ ಪ್ರಮುಖ ಬೀದಿಗಳಲ್ಲಿ ಎಳೆಯುವಾಗ ಈ ದುರ್ಘಟನೆ ಸಂಭವಿಸಿದೆ.
57 ವರ್ಷದ ಸಿ. ಮನೋಹರನ್ ಮತ್ತು 50 ವರ್ಷದ ಸರವಣನ್ ಮೃತಪಟ್ಟ ದುರ್ದೈವಿಗಳಾಗಿದ್ದು, ಗಾಯಗೊಂಡ ನಾಲ್ವರನ್ನು ಧರ್ಮಪುರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಸಾವನ್ನಪ್ಪಿರುವವರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಘೋಷಿಸಿದ್ದಾರೆ.