alex Certify BIG NEWS: ದೇಶದಲ್ಲಿಯೂ ಹೆಚ್ಚುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ; 3,424 ಆಕ್ಟೀವ್ ಕೇಸ್ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದಲ್ಲಿಯೂ ಹೆಚ್ಚುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ; 3,424 ಆಕ್ಟೀವ್ ಕೇಸ್ ದಾಖಲು

ನವದೆಹಲಿ: ದೇಶದಲ್ಲಿ BF.7 ಹೊಸ ರೂಪಾಂತರಿ ವೈರಸ್ ಆತಂಕ ಎದುರಾಗಿದೆ. ಈ ಮಧ್ಯೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 227 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಒಂದೇ ದಿನದಲ್ಲಿ ಮಹಾಮಾರಿಗೆ ಇಬ್ಬರು ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 530693 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 3,424 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,42,989 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 1,11,304 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,05,16,249 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,29,159 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...