alex Certify BIG NEWS: ದೇಶದಲ್ಲಿ ಭ್ರಷ್ಟಾಚಾರ ಆರಂಭಿಸಿದ್ದೇ ರಾಹುಲ್ ಗಾಂಧಿ ತಾತ; ಭಯೋತ್ಪಾದನೆಗೆ ಇನ್ನೊಂದು ಹೆಸರೇ ಕಾಂಗ್ರೆಸ್; ನಳೀನ್ ಕುಮಾರ್ ಕಟೀಲ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದಲ್ಲಿ ಭ್ರಷ್ಟಾಚಾರ ಆರಂಭಿಸಿದ್ದೇ ರಾಹುಲ್ ಗಾಂಧಿ ತಾತ; ಭಯೋತ್ಪಾದನೆಗೆ ಇನ್ನೊಂದು ಹೆಸರೇ ಕಾಂಗ್ರೆಸ್; ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

ಹಾವೇರಿ: ಭಾರತದಲ್ಲಿ ಭ್ರಷ್ಟಾಚಾರವನ್ನು ಆರಂಭಿಸಿದ್ದೇ ಕಾಂಗ್ರೆಸ್ ಪಕ್ಷ. ಭಯೋತ್ಪಾದನೆ, ಭ್ರಷ್ಟಾಚಾರದ ಇನ್ನೊಂದು ಹೆಸರೇ ಕಾಂಗ್ರೆಸ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಹಾವೇರಿಯ ಹುಕ್ಕೇರಿ ಮಠಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ನಳೀನ್ ಕುಮಾರ್ ಕಟೀಲ್, ದೇಶದಲ್ಲಿ ಭ್ರಷ್ಟಾಚಾರವನ್ನು ಆರಂಭ ಮಾಡಿದ್ದೇ ರಾಹುಲ್ ಗಾಂಧಿ ತಾತ. ರಾಹುಲ್ ಗಾಂಧಿ ಭ್ರಷ್ಟಾಚಾರದ ಒಂದು ಫಲಾನುಭವಿ. ಹಾಗಾಗಿ ಅವರು ಬೇಲ್ ನಲ್ಲಿ ಇದ್ದಾರೆ ಎಂದು ಹೇಳಿದ್ದಾರೆ.

ಎಸ್ಸಿ, ಎಸ್ ಟಿ ಮೀಸಲಾತಿ ಹೆಚ್ಚಳ ಮೂಗಿಗೆ ತುಪ್ಪ ಸವರುವ ಕೆಲಸ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ನಳೀನ್ ಕುಮಾರ್ ಕಟೀಲ್, ಸಿದ್ದರಾಮಯ್ಯ ಬಹುಮತ ಪಡೆದು ರಾಜ್ಯದಲ್ಲಿ ಐದು ವರ್ಷ ಮುಖ್ಯಮಂತ್ರಿ ಆಗಿದ್ದರು. ಅವರು ಅಹಿಂದ ಹೋರಾಟ ನಡೆಸಿ ಆ ಕೋಟಾದ ಭಿಕ್ಷೆಯಲ್ಲಿ ಮುಖ್ಯಮಂತ್ರಿಯಾಗಿದ್ದರು. ಆದರೂ ಆಗ ಹಿಂದುಳಿದ ಸಮಾಜಗಳಿಗೆ ನ್ಯಾಯ ಕೊಡದಿದ್ದವರು ಈಗ ನಾವು ಮೀಸಲಾತಿ ಕೊಟ್ಟಾಗ ಅಸಮಾಧಾನದ ಮಾತನಾಡುತ್ತಾರೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...