alex Certify BIG NEWS: ದೇಶದಲ್ಲಿ ಮಂಕಿಪಾಕ್ಸ್ ಪ್ರಕರಣ 8 ಕ್ಕೆ ಏರಿಕೆ; ದೆಹಲಿಯಲ್ಲಿ ಮತ್ತೋರ್ವ ವ್ಯಕ್ತಿಯಲ್ಲಿ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದಲ್ಲಿ ಮಂಕಿಪಾಕ್ಸ್ ಪ್ರಕರಣ 8 ಕ್ಕೆ ಏರಿಕೆ; ದೆಹಲಿಯಲ್ಲಿ ಮತ್ತೋರ್ವ ವ್ಯಕ್ತಿಯಲ್ಲಿ ಸೋಂಕು ದೃಢ

ನವದೆಹಲಿ: ದೇಶದಲ್ಲಿ ಮಂಕಿಪಾಕ್ಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದೀಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಪ್ರಕರಣ ಪತ್ತೆಯಾಗಿದೆ.

ದೆಹಲಿಯಲ್ಲಿ ಇದು ಮೂರನೇ ಮಂಕಿಪಾಕ್ಸ್ ಪ್ರಕರಣವಾಗಿದ್ದು, ದೆಹಲಿಯಲ್ಲಿ ವಾಸವಾಗಿರುವ ನೈಜಿರಿಯನ್ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ಭಾರತದಲ್ಲಿ ಮಂಕಿಪಾಕ್ಸ್ ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಕೇರಳದಲ್ಲಿ ಇಂದು ಬೆಳಿಗ್ಗೆ 5ನೇ ಕೇಸ್ ಪತ್ತೆಯಾಗಿದ್ದು, ಯುಎಇಯಿಂದ ಆಗಮಿಸಿದ್ದ 30 ವರ್ಷದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಪತ್ತೆಯಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಈ ಪ್ರಕರಣದ ಬೆನ್ನಲ್ಲೇ ಇದೀಗ ದೆಹಲಿಯಲ್ಲಿ ಮತ್ತೊಂದು ಪ್ರಕರಣ ಪತ್ತೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...