ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ಮತ್ತೆ ಆರ್ಭಟಿಸಲು ಆರಂಭಿಸಿದೆ. ಬೇಸಿಗೆ ಹತ್ತಿರವಾಗುತ್ತಿದ್ದಂತೆ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ದೆಹಲಿ, ಮಹಾರಾಷ್ಟ್ರ ಮತ್ತು ಗುಜರಾತ್ ಸೇರಿದಂತೆ ಭಾರತದ ಎಲ್ಲಾ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ.
ಕಳೆದ 24 ಗಂಟೆಗಳಲ್ಲಿ ಬಾರತದಲ್ಲಿ ಸುಮಾರು 918 ಕೊರೊನಾ ರೋಗಿಗಳು ಪತ್ತೆಯಾಗಿದ್ದಾರೆ. ಕೊರೊನಾ ದಿನೇ ದಿನೇ ಹೆಚ್ಚಾಗುತ್ತಿರುವುದರ ಹಿನ್ನಲೆಯಲ್ಲಿ ಈ ಬಗ್ಗೆ ತಜ್ಞರು ಕೂಡ ಕಳವಳ ವ್ಯಕ್ತಪಡಿಸಿದ್ದಾರೆ. ಇನ್ನೊಮ್ಮೆ ಜನರು ಎಚ್ಚೆತ್ತುಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಜನಸಂದಣಿ ಇರುವ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ರಾಜಧಾನಿ ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 72 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಪಾಸಿಟಿವಿಟಿ ದರ ಶೇ.3.95ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆಯ ಪ್ರಕಾರ ದೆಹಲಿಯಲ್ಲಿ H3N2 ಎಂಟಿವೈರಸ್ ಜೊತೆಗೆ ಕೊರೊನಾ ಸೋಂಕು ಕೂಡ ಹರಡಲಾರಂಭಿಸಿದೆ. ಕೊರೋನಾ ಪಾಸಿಟಿವಿಟಿ ದರ ಶನಿವಾರ 3.52 ಪ್ರತಿಶತವಾಗಿದ್ದರೆ, ಶುಕ್ರವಾರ ಅದು 3.13 ಪ್ರತಿಶತದಷ್ಟಿತ್ತು.
ಮಹಾರಾಷ್ಟ್ರದಲ್ಲಿ ಭಾನುವಾರ 236 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ಮುಂಬೈನಲ್ಲಿ 52 ಪ್ರಕರಣಗಳು ವರದಿಯಾಗಿದ್ದು, ಇದನ್ನು ಹೊರತುಪಡಿಸಿ, ಥಾಣೆಯಲ್ಲಿ 33, ಪುಣೆಯಲ್ಲಿ 69, ನಾಸಿಕ್‌ನಲ್ಲಿ 21 ಮತ್ತು ಕೊಲ್ಲಾಪುರ ಮತ್ತು ಅಕೋಲಾದಲ್ಲಿ ತಲಾ 13 ಮಂದಿಗೆ ಸೋಂಕು ತಗುಲಿದೆ. ಕಳೆದ 24 ಗಂಟೆಗಳಲ್ಲಿ ಇಡೀ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಏರಿಕೆಯಾಗಿದ್ದು, ಆರೋಗ್ಯ ಇಲಾಖೆಯ ಆತಂಕಕ್ಕೆ ಕಾರಣವಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 918 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ.
ಇದರೊಂದಿಗೆ ಸೋಮವಾರ ಸಕ್ರಿಯ ಪ್ರಕರಣಗಳ ಸಂಖ್ಯೆ 6,350ಕ್ಕೆ ಏರಿದೆ. ಪಾಸಿಟಿವಿಟಿ ದರ ಶೇ.2.8 ಕ್ಕೆ ಏರಿದೆ. ಆರೋಗ್ಯ ಸಚಿವಾಲಯದ ಪ್ರಕಾರ, ಇದುವರೆಗೆ 92.03 ಕೋಟಿ ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ 44,225 ಪರೀಕ್ಷೆಗಳನ್ನು ಮಾಡಲಾಗಿದೆ. ಭಾನುವಾರ 129 ದಿನಗಳ ನಂತರ ಒಂದೇ ದಿನದಲ್ಲಿ 1000 ಕ್ಕೂ ಹೆಚ್ಚು ರೋಗಿಗಳು ಪತ್ತೆಯಾಗಿದ್ದಾರೆ. ಇಡೀ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 5915 ಕ್ಕೆ ಏರಿಕೆಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಮೃತರು ರಾಜಸ್ಥಾನ, ಮಹಾರಾಷ್ಟ್ರ ಮತ್ತು ಕೇರಳದವರು.