ಬೆಂಗಳೂರು: ವಿಧನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಚಾಣ, ಬಂಗಾರ ಅಕ್ರಮ ಸಾಗಾಟ ಪ್ರಕರಣಗಳು ಹೆಚ್ಚುತ್ತಿದ್ದು, ಬೈಕ್ ನಲ್ಲಿ 6.5 ಕೆ.ಜಿ ಚಿನ್ನ ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಎಸ್.ಜೆ.ಪಾರ್ಕ್ ಪೊಲೀಸರು ನಾಕಾಬಂಧಿ ತಪಾಸಣೆ ವೇಳೆ ದ್ವಿಚಕ್ರವಾಹನದಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬೈಕ್ ನಲ್ಲಿ 6.5 ಕೆಜಿ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿ ನಿಕುಂಜ್ ಬಾಬಿಲ್ ನನ್ನು ಬಂಧಿಸಲಾಗಿದೆ.
ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ಹೋಗುತ್ತಿದ್ದ ಹೋಂಡಾ ಆಕ್ಟಿವಾವನ್ನು ತಡೆದ ಪೊಲೀಸರು ತಪಾಸಣೆ ನಡೆಸಿದ್ದಾರೆ. ಈ ವೇಳೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿರುವುದು ಪತ್ತೆಯಾಗಿದೆ.