ಬೆಂಗಳೂರು: 2020-21ನೇ ಸಾಲಿನಲ್ಲಿ ದಾಖಲಾಗಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗ ಫಲಿತಾಂಶ ಪ್ರಕಟಿಸುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶಕ್ಕೆ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ.ಯಲ್ಲಿ ಹಾಗೂ ಪ್ರಥಮ ಪಿಯುಸಿಯಲ್ಲಿ ಪಡೆದ ಅಂಕಗಳನ್ನು ಪರಿಶೀಲಿಸಿ ಗ್ರೇಡಿಂಗ್ ಆಧಾರದಲ್ಲಿ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿದ್ದಾರೆ.
ಇದೇ ವೆಳೆ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಕಲ್ಪಿಸುವ ಸಿ.ಇ.ಟಿ.ಪರೀಕ್ಷೆಗೆ ಪಿಯು ಫಲಿತಾಂಶ ಪರಿಗಣಿಸಿ ವೇಟೇಜ್ ನೀಡುವ ಪ್ರಕ್ರಿಯೆಯನ್ನು ಕೈಬಿಟ್ಟು, ಕೇವಲ ಸಿ.ಇ.ಟಿ ಪರೀಕ್ಷೆಗಳ ಅಂಕಗಳನ್ನು ಮಾತ್ರ ರ್ಯಾಂಕಿಂಗ್ ಗೆ ಪರಿಗಣಿಸಬೇಕು ಎಂದು ಉಪಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಅವರಿಗೂ ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.