ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, 18,413 ವಿದ್ಯಾರ್ಥಿಗಳ ಪೈಕಿ 5,507 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ್ವಿತೀಯ ಪಿಯು ರಿಸಲ್ಟ್ ತಿರಸ್ಕರಿಸಿದ್ದ ಮತ್ತು ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಗೊಂಡಿದ್ದು, 18,413 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅವರಲ್ಲಿ 5,507 ವಿದ್ಯಾರ್ಥಿಗಳು ಪಾಸ್ ಆಗಿದ್ದು, 12,906 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ ಎಂದರು.
BIG NEWS: ಕೋವಿಡ್ ಪರಿಹಾರವನ್ನೂ ನೀಡಿಲ್ಲ; ಪ್ಯಾಕೇಜು ಕೊಟ್ಟಿಲ್ಲ; ಈಗ ಬೆಲೆ ಏರಿಕೆಯಿಂದ ಹೆಣ್ಣುಮಕ್ಕಳು ತಾಳಿ ಮಾರಿ ಬದುಕುವ ಸ್ಥಿತಿ ಬಂದಿದೆ; ಸರ್ಕಾರದ ವಿರುದ್ಧ ಡಿಕೆಶಿ ಕಿಡಿ
556 ಪ್ರೆಶರ್ಸ್, 183 ರಿಪೀಟರ್ಸ್ ಪಾಸ್ ಆಗಿದ್ದಾರೆ. 17,470 ಖಾಸಗಿ ವಿದ್ಯಾರ್ಥಿಗಳ ಪೈಕಿ 4,768 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ ಎಂದು ವಿವರಿಸಿದರು.
http://karresults.nic.in ನಲ್ಲಿಯೂ ಫಲಿತಾಂಶ ಲಭ್ಯವಿದೆ ಎಂದು ತಿಳಿಸಿದರು.