ಸಿಂದಗಿ: ಮಿನಿ ಸಮರ ಎಂದೇ ಬಿಂಬಿತವಾಗಿರುವ ಸಿಂದಗಿ ಹಾಗೂ ಹಾನಗಲ್ ಉಪಚುನಾವಣಾ ಅಖಾಡ ರಂಗೇರಿದ್ದು, ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತ ಪಕ್ಷ ಬಿಜೆಪಿ ನಾಯಕರಿಗೆ ಬಹಿರಂಗ ಚರ್ಚೆಗೆ ಬರುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಅನುದಾನ ಬಿದುಗಡೆ, ಅಭಿವೃದ್ಧಿ ವಿಚಾರವಾಗಿ ಯಾರ್ಯಾರು ಎಷ್ಟು ಸುಳ್ಳು ಹೇಳ್ತಾರೆ, ಎಷ್ಟು ಸತ್ಯ ಹೇಳ್ತಾರೆ ಎಂಬುದು ಗೊತ್ತಾಗುತ್ತೆ. ಸಿಎಂ ಬೊಮ್ಮಾಯಿ ಅವರಿಗೆ ಧಮ್ ಇದ್ರೆ ಒಂದೇ ವೇದಿಕೆ ಮೇಲೆ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.
ಕೊರೊನಾ ಸಾಂಕ್ರಾಮಿಕದ ಬಳಿಕ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಾಗಿದೆ ಈ ಮಹತ್ವದ ಬದಲಾವಣೆ….!
ವಾಜಪೇಯಿ, ಮೋದಿ, ಬಿ ಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬೊಮ್ಮಾಯಿ ಮಾಡಿದ್ದೇನು? ಮಾದಿಗರಿಗೆ ಅವರೆಲ್ಲ ಕೊಟ್ಟ ಕೊಡುಗೆಯೇನು? ಯಾವ ಸಮುದಾಯಗಳಿಗೆ ಎಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ ಎಂಬುದು ಬಹಿರಂಗವಾಗಿ ಚರ್ಚೆ ನಡೆಯಲಿ ಎಂದರು.
ಎಸ್.ಟಿ/ ಎಸ್.ಸಿ ಗೆ ಹೆಚ್ಚಿನ ಅನುದಾನ ನೀಡಿದ್ದು ನನ್ನ ಅವಧಿಯಲ್ಲಿ. ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಬಿಡುಗಡೆ ಮಾಡಿದ್ದೆ. ನೀನು ಏನು ಕೊಟ್ಟೆ ಯಡಿಯೂರಪ್ಪ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಸ್ವಾತಂತ್ರ್ಯ ಪೂರ್ವದಲ್ಲಿ ಭಾರತೀಯ ಜನತಾ ಪಾರ್ಟಿ ಇರಲಿಲ್ಲ. 1950ರಲ್ಲಿ ಜನಸಂಘ ಆರಂಭವಾಯಿತು. 1980ರಲ್ಲಿ ಭಾರತೀಯ ಜನತಾ ಪಾರ್ಟಿ ಹುಟ್ಟಿಕೊಂಡಿತು. ಬಿಜೆಪಿಯವರು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ರಾ? ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ರಾ? ಈಗ ದೇಶ ಉದ್ದಾರ ಮಾಡ್ತೀವಿ ಎಂದು ಬಂದಿದ್ದಾರೆ ಎಂದು ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.