ಬೆಂಗಳೂರು: ಹಿಜಾಬ್ ಕುರಿತು ಹೈಕೋರ್ಟ್ ನೀಡಿರುವ ತೀರ್ಪಿನಿಂದಾಗಿ ಸಂವಿಧಾನ ಧರ್ಮಕ್ಕಿಂತ ದೊಡ್ಡದು ಎಂಬುದು ಸಾಬೀತಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಹಿಜಾಬ್ ವಿವಾದ ಕುರಿತು ಹೈಕೋರ್ಟ್ ತೀರ್ಪಿನ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಯಡಿಯೂರಪ್ಪ, ನ್ಯಾಯಾಲಯದ ತೀರ್ಪನ್ನು ಎಲ್ಲರೂ ಪಾಲಿಸಬೇಕು. ಅನಗತ್ಯವಾಗಿ ವಿವಾದ ಮಾಡದೇ ಎಲ್ಲರೂ ತೀರ್ಪನ್ನು ಗೌರವಿಸಿ, ಮತ್ತೆ ವಿವಾದ ಸೃಷ್ಟಿಸಲು ಹೋಗಬಾರದು ಎಂದು ಮನವಿ ಮಾಡಿದರು.
ಸಂವಿಧಾನ ಧರ್ಮಕ್ಕಿಂತ ದೊಡ್ಡದು ಎಂಬುದನ್ನು ಹೈಕೋರ್ಟ್ ಸಾಬೀತುಪಡಿಸಿದೆ. ಇದರಲ್ಲಿ ಗೊಂದಲಗಳಿಗೆ ಅವಕಾಶವಿಲ್ಲ ಎಂದು ಹೇಳಿದರು.