alex Certify BIG NEWS: ಧರ್ಮವಿನಾಶಕ್ಕೆ ಕಂಕಣತೊಟ್ಟ ಕಿರಾತಕರಿಗೆ ಪಾಠ ಕಲಿಸೋಣ; ಯುಗಾದಿ ಪರ್ವದಿನದಂದು ಸಂಕಲ್ಪ ಮಾಡೋಣ ಎಂದು ಕರೆ ನೀಡಿದ HDK | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಧರ್ಮವಿನಾಶಕ್ಕೆ ಕಂಕಣತೊಟ್ಟ ಕಿರಾತಕರಿಗೆ ಪಾಠ ಕಲಿಸೋಣ; ಯುಗಾದಿ ಪರ್ವದಿನದಂದು ಸಂಕಲ್ಪ ಮಾಡೋಣ ಎಂದು ಕರೆ ನೀಡಿದ HDK

ಬೆಂಗಳೂರು: ಯುಗಾದಿ ಪರ್ವದಿನದಂದು ನಾವೆಲ್ಲ ಒಂದು ಸಂಕಲ್ಪ ಮಾಡೋಣ. ಕರ್ನಾಟಕವು ಕರ್ನಾಟಕವಾಗಿಯೇ ಉಳಿಯಬೇಕೆಂಬ ಆಶಯದಿಂದಲೇ ಈ ಸಂಕಲ್ಪ.
ಅಧಿಕಾರಕ್ಕಾಗಿ ಏನನ್ನೂ ಮಾಡಲು ಹೇಸದ ಕಿಡಿಗೇಡಿಗಳಿಗೆ, ಧರ್ಮವಿನಾಶಕ್ಕೆ ಕಂಕಣತೊಟ್ಟ ಕಿರಾತಕರಿಗೆ ಪಾಠ ಕಲಿಸುವ ಧೈರ್ಯ ಮಾಡೋಣ. ಕರ್ನಾಟಕ ನಮ್ಮದು. ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ದ್ರೋಹಿಗಳದ್ದಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಕುರ್ಚಿ ಹಿಡಿಯಲು ಮನಸುಗಳನ್ನು ಮುರಿಯುತ್ತಿದ್ದಾರೆ. ನಾಳೆ ಮನೆಗಳನ್ನೂ ಒಡೆದು ಅಣ್ಣ-ತಮ್ಮ, ಅಕ್ಕ-ತಂಗಿ ನಡುವೆಯೂ ಬೆಂಕಿ ಇಟ್ಟು ಮನೆ ಮುರುಕರೂ ಆಗುತ್ತಾರೆ. ಹಿಂದುತ್ವದ ಹೆಸರೇಳಿಕೊಂಡು ʼಹಿಂದುತ್ವದ ವಿನಾಶʼ ಮಾಡುತ್ತಿರುವ ಈ ನಕಲಿಗಳ ಮಾತನ್ನು ಯಾರೂ ನಂಬಬಾರದು. ಕರಪತ್ರ ಹಿಡಿದು ಬಂದರೆ ಭಾವೈಕ್ಯತೆಯ ಪಾಠ ಹೇಳಿ ಕಳಿಸಿ ಎಂದು ಸರಣಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಕಾಂಟ್ಯಾಕ್ಟ್ ಲೀಸ್ಟ್ ನಲ್ಲಿದ್ದವರಿಗೆಲ್ಲ ಸೆಂಡ್ ಆಯ್ತು ಸಾಲಗಾರನ ಪತ್ನಿಯ ಅಶ್ಲೀಲ ಫೋಟೊ

ತಲೆತಲಾಂತರಗಳಿಂದ ಯುಗಾದಿ ಇದೆ, ವರ್ಷತೊಡಕೂ ಇದೆ, ಹಲಾಲೂ ಇದೆ. ʼಹಲಾಲ್ ಹಾಲಾಹಲʼವನ್ನುಈಗ ಸೃಷ್ಟಿಸಲಾಗಿದೆ. ಹಲಾಲು, ಜಟ್ಕಾ ಎಂದು ಜನರನ್ನು ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು. ಹಿಂದುತ್ವ ಹೆಸರಿನಲ್ಲಿ ರಾಜಕೀಯ ಜನ್ಮ ಪಡೆದು ರಕ್ಕಸರೂಪದಲ್ಲಿ ಬೆಳೆದಿರುವ ಪಕ್ಷದ ಬಾಲಂಗೋಚಿಗಳಿವು. ಇವರು ನೈಜ ಹಿಂದುಗಳೇ ಅಲ್ಲ.

ಅನ್ನ-ಆಹಾರದಲ್ಲಿ ಅರಾಜಕತೆ ಉಂಟು ಮಾಡಿ ಬೇಳೆ ಬೇಯಿಸಿಕೊಳ್ಳುವವರು ʼಭಾರತಕ್ಕೆ ಮತ್ತು ಭಾವೈಕ್ಯ ಪರಂಪರೆಗೆ ದೊಡ್ಡ ಅಪಾಯ.ʼ ಮನಸುಗಳ ನಡುವೆ ಯುದ್ಧವನ್ನೇ ಸೃಷ್ಟಿಸುತ್ತಿರುವ ಈ ಕಿಡಿಗೇಡಿಗಳು ಯುದ್ಧೋನ್ಮಾದ ಸರ್ವಾಧಿಕಾರಿಗಳಿಗಿಂತಲೂ ವಿನಾಶಕಾರಿ. ಇದನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು. ಯುಗಾದಿ ಹಬ್ಬದ ದಿನ ನೈಜ ಹಿಂದುಗಳು ಯಾರೂ ಮಾಂಸ ಮಾರುವುದಿಲ್ಲ, ಖರೀದಿಸುವುದೂ ಇಲ್ಲ. ಆದರೆ, ಜಟ್ಕಾ ಕಟ್ ಹೆಸರಿನಲ್ಲಿ ಕೆಲವರು ಇವತ್ತೇ ಮಾಂಸದ ಅಂಗಡಿಗಳನ್ನು ತೆರೆದಿದ್ದಾರೆ! ಇವರಾ ಹಿಂದುಗಳು? ʼಇಂಡಿಯಾದಿಂದಲೇ ಹಿಂದೂ ಧರ್ಮವನ್ನು ಮೂಲೋತ್ಪಾಟನೆ ಮಾಡುವುದೇ ಇವರ ಹಿಡನ್ ಅಜೆಂಡಾ ಆಗಿದೆʼ ಎನ್ನುವುದು ನನ್ನ ಅಭಿಪ್ರಾಯ.

ಅನಾದಿ ಕಾಲದಿಂದ ಯುಗಾದಿ, ವರ್ಷತೊಡಕನ್ನು ನಾವೆಲ್ಲರೂ ಆಚರಿಸಿದಂತೆ, ಈ ವರ್ಷವೂ ಆಚರಿಸೋಣ. ʼಭಾರತವನ್ನು ಒಡೆಯುವ ವಿಷಬೀಜಾಸುರರನ್ನು ಹಿಮ್ಮೆಟ್ಟಿಸೋಣ.ʼ ಸರ್ವ ಜನಾಂಗದ ತೋಟ ಕರುನಾಡಿನಲ್ಲಿರುವ ಪ್ರತಿಯೊಬ್ಬರಿಗೂ ನನ್ನ ಮನವಿ ಇದು. ಇಡೀ ದೇಶಕ್ಕೆ ಮಾದರಿಯಾದ ನೆಮ್ಮದಿಯ ಕರುನಾಡನ್ನು ಕಾಪಾಡಿಕೊಳ್ಳೋಣ ಎಂದು ಕರೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...